ಹಾಸನ: ಇಲ್ಲಿನ ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ನಲ್ಲಿ ಅಸಮಾಧಾನ ತೀವ್ರವಾಗಿದೆ. ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಹುಡಾ ಅಧ್ಯಕ್ಷ ಸ್ಥಾನವನ್ನು ಸ್ಥಳೀಯರಿಗೆ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಘಟಕದ ಕಾರ್ಯಕರ್ತರು, ಮುಖಂಡರು ಹುಡಾ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ನಡೆಸಿದ
ಪ್ರತಿಭಟನಕಾರರು, ಹುಡಾ ಅಧ್ಯಕ್ಷ ಸ್ಥಾನಕ್ಕೆ ಸ್ಥಳೀಯರಿಗೆ ಆದ್ಯತೆ ನೀಡಬೇಕು. ಹೊರಗಿನವರನ್ನು ಪರಿಗಣಿಸಬಾರದು ಎಂದು ಘೋಷಣೆ ಕೂಗಿದರು. ಹುಡಾ ಕಚೇರಿ ಎದುರು ಕೆಲಕಾಲ ಧರಣಿ ನಡೆಸಿದರು.

ನಗರಸಭೆಯ ಮಾಜಿ ಸದಸ್ಯ ಚಂದ್ರಶೇಖರ್ ಮಾತನಾಡಿ, ‘ಪ್ರತಿಭಟನೆ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ, ಸಂಸದ ಶ್ರೇಯಸ್ ಪಟೇಲ್ ಹಾಗೂ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡರಿಗೆ ನಮ್ಮ ಹಕ್ಕೊತ್ತಾಯ ತಿಳಿಸುತ್ತಿದ್ದೇವೆ’ ಎಂದರು.

ಹಾಸನ ವಿಧಾನಸಭಾ ಕ್ಷೇತ್ರದವರನ್ನು ಹೊರತುಪಡಿಸಿ, ಹೊರಗಿನವರಿಗೆ ಅಧ್ಯಕ್ಷ ಸ್ಥಾನ ನೀಡಿದರೆ ಏನು ಪ್ರಯೋಜನ? ಅವರಿಗೆ ಕ್ಷೇತ್ರದ ಬಗ್ಗೆ ಯಾವುದೇ ಅನುಭವ ಇರುವುದಿಲ್ಲ. ಸ್ಥಳೀಯ ರಾಜಕೀಯದ ಬಗ್ಗೆ ತಿಳಿದಿರುವುದಿಲ್ಲ. ಅರಸೀಕೆರೆಯ ಪಟೇಲ್ ಶಿವಪ್ಪ ಅವರನ್ನು ನೇಮಕ ಮಾಡುವ ಕುರಿತು ಮಾಧ್ಯಮಗಳಲ್ಲಿ ಪ್ರಕಟಗೊಂಡಿದೆ. ಅವರು ಹಾಸನ ವಿಧಾನಸಭಾ ಕ್ಷೇತ್ರದ ಮತದಾರರೂ ಅಲ್ಲ. ಸ್ಥಳೀಯರಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

‘ಹುಡಾ ಅಧ್ಯಕ್ಷರ ನೇಮಕ ಸಂಬಂಧ ಜಿಲ್ಲಾಧಿಕಾರಿಗೂ ಮನವಿ ಸಲ್ಲಿಸಲಾಗಿದೆ. ಮುಖ್ಯಮಂತ್ರಿಯನ್ನು ಭೇಟಿ ಮಾಡಿ ತಿಳಿಸಲಾಗಿದೆ. ಅರಸೀಕೆರೆಗೆ ಸಮಾವೇಶಕ್ಕೆ ಬಂದಾಗಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಸನ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಹಾಗೂ ಮುಖಂಡರು ಸ್ಥಳೀಯರನ್ನೇ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವಂತೆ ಒತ್ತಾಯಿಸಿದ್ದೆವು. ನಮ್ಮ ಮನವಿಗೆ ಅವರು ಸಮ್ಮತಿಸಿದ್ದು, ಸ್ಥಳೀಯರನ್ನು ಪರಿಗಣಿಸಿ ಹುಡಾ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಬೇಕು’ ಎಂದು ಆಗ್ರಹಿಸಿದರು.

ವಿನೋದ್ ಕುಮಾರ್, ರಂಗಸ್ವಾಮಿ, ಲೋಕೇಶ್, ಕೃಷ್ಣ, ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಸಮೀರ್, ಆದರ್ಶ್, ರಾಜೇಶ್, ಗುರುಪ್ರಸಾದ್, ಆರಿಫ್ ಖಾನ್, ಡಿ.ಬಿ. ಪುಟ್ಟೇಗೌಡ, ಎಚ್.ಬಿ. ಹೇಮಂತ್ ಕುಮಾರ್, ಸಮೀರ್ ಪಾಷಾ, ರಾಮಚಂದ್ರ, ಶಿವಣ್ಣ, ಡಿ.ಪಿ. ಅಭಿಲಾಶ್, ಪರಮೇಶ್, ಎನ್ಐಟಿಯುಸಿ ಸದಸ್ಯರು ಹಾಗೂ ನೂರಾರು ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು.

‘ಸ್ಥಳೀಯ ನಿಷ್ಠಾವಂತರಿಗೆ ನೀಡಿ’

ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಹಾಸನ ವಿಧಾನಸಭಾ ಕ್ಷೇತ್ರದ ಪಕ್ಷದ ನಿಷ್ಠಾವಂತರಿಗೆ ನೀಡುವಂತೆ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಜಿತ್ ನಾರಾಯಣ್ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಕಳೆದಿದೆ. ಆದರೂ ಹುಡಾ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡದಿರುವುದು ದುರದೃಷ್ಟಕರ’ ಎಂದರು.

‘ಪ್ರಾಧಿಕಾರಕ್ಕೆ ಅಧ್ಯಕ್ಷರನ್ನು ನೇಮಕ ಮಾಡದೇ ಇರುವುದರಿಂದ ನಗರದ ಅಭಿವೃದ್ಧಿಗೆ ಕುಂಠಿತವಾಗುತ್ತಿದೆ. ಕೂಡಲೇ ಹಾಸನ ವಿಧಾನಸಭಾ ಕ್ಷೇತ್ರದ ಮುಖಂಡರು ಅಥವಾ ಕಾರ್ಯಕರ್ತರನ್ನು ನೇಮಿಸುವ ಮೂಲಕ ನಗರದ ಅಭಿವೃದ್ಧಿಗೆ ಸಹಕರಿಸಬೇಕು’ ಎಂದು ಒತ್ತಾಯಿಸಿದರು.

‘ಅರಸೀಕೆರೆ ತಾಲ್ಲೂಕಿನ ಮುಖಂಡರೊಬ್ಬರಿಗೆ ಹುಡಾ ಅಧ್ಯಕ್ಷ ಸ್ಥಾನ ನೀಡಲು ಸರ್ಕಾರ ಹೊರಟಿರುವುದು ಸರಿಯಲ್ಲ. ನಮ್ಮ ಬೇಡಿಕೆಯನ್ನು ಪರಿಗಣಿಸಿ ಸ್ಥಳೀಯರಿಗೆ ಅವಕಾಶ ನೀಡದಿದ್ದರೆ, ಪ್ರತಿಭಟನೆಯ ಹಾದಿ ಹಿಡಿಯಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಶಿವಕುಮಾರ್, ರಂಜಿತಾ ಮಂಜುನಾಥ್, ಸುರೇಶ್, ಗಿರೀಶ್, ಕೆ.ಟಿ. ರಾಜು ಇದ್ದರು.

‘ಸ್ಥಳೀಯರಿಗೆ ನೀಡದಿದ್ದರೆ ಹೋರಾಟ’

ಹಾಸನ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹಿಂದಿನಂತೆ ಸ್ಥಳೀಯರನ್ನೇ ಅಧ್ಯಕ್ಷರನ್ನಾಗಿ ನೇಮಿಸುವಂತೆ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಘಟಕದ ಕಾರ್ಯದರ್ಶಿ ಕುಮಾರ ಶೆಟ್ಟಿ
ಎಂ.ಎಚ್. ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಾಸನ ವಿಧಾನಸಭಾ ಕ್ಷೇತ್ರದಲ್ಲಿಯೇ ಹಲವು ವರ್ಷಗಳಿಂದ ಪಕ್ಷ ಸಂಘಟನೆಗೆ ದುಡಿದಿರುವ ನಿಷ್ಠಾವಂತ ಕಾರ್ಯಕರ್ತರು, ಮುಖಂಡರು ಅನೇಕರಿದ್ದಾರೆ. ಅವರನ್ನು ಪರಿಗಣಿಸಬಹುದು. ನಾನು ಪಕ್ಷದಲ್ಲಿ ಹಲವಾರು ಹುದ್ದೆ ಸಮರ್ಥವಾಗಿ ನಿಭಾಯಿಸಿದ್ದೇನೆ. ನಮ್ಮ ಸೇವೆ ಪರಿಗಣಿಸಬೇಕು’ ಎಂದರು.

‘ಹಾಸನ ವಿಧಾನಸಭಾ ಕ್ಷೇತ್ರ ಹೊರತಾಗಿ ಬೇರೆಯವರನ್ನು ನೇಮಕ ಮಾಡಿದಲ್ಲಿ ಪ್ರತಿಭಟನೆ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ನೇತ್ರಾವತಿ, ರಾಮಚಂದ್ರ, ಎ.ಬಿ. ಶಂಕರ್ ಶೆಟ್ಟಿ, ರಾಜು ಇದ್ದರು.

‘ಸಾಮೂಹಿಕ ರಾಜೀನಾಮೆಗೆ ನಿರ್ಧಾರ’

ಹುಡಾ ಅಧ್ಯಕ್ಷ ಸ್ಥಾನಕ್ಕೆ ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಟೇಲ್ ಶಿವಪ್ಪ ಅವರನ್ನು ನೇಮಕ ಮಾಡಿದಲ್ಲಿ, ಕಾಂಗ್ರೆಸ್ನ ಹಾಸನ ವಿಧಾನಸಭಾ ಕ್ಷೇತ್ರದ ನಾಯಕರು, ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

‘ನಮ್ಮದೇ ಪಕ್ಷದ ಸರ್ಕಾರ ಅಧಿಕಾರದಲ್ಲಿದೆ. ಇಂತಹ ಸಂದರ್ಭದಲ್ಲಿ ನಾವೇ ಪ್ರತಿಭಟನೆಗೆ ಇಳಿಯಬೇಕಾಗಿರುವುದು ದುರದೃಷ್ಟಕರ. ಹಾಸನ ಕ್ಷೇತ್ರದಲ್ಲಿ ದುಡಿದಿರುವವರನ್ನು ಬಿಟ್ಟು, ಬೇರೆ ಕ್ಷೇತ್ರದವನ್ನು ಹುಡಾಕ್ಕೆ ನೇಮಕ ಮಾಡುವುದಾದರೆ, ನಾವು ಪಕ್ಷದಲ್ಲಿ ಏಕಾದರೂ ಇರಬೇಕು’ ಎಂದು ಮುಖಂಡರೊಬ್ಬರು ಪ್ರಶ್ನಿಸಿದರು.

‘ಎಲ್ಲವನ್ನೂ ಅರಸೀಕೆರೆಗೆ ಕೊಡುವುದಾದರೆ, ಪಕ್ಷಕ್ಕೆ ನಮ್ಮ ಅವಶ್ಯಕತೆ ಇಲ್ಲದಂತೆ ಕಾಣುತ್ತಿದೆ. ನಾವು ರಾಜೀನಾಮೆ ನೀಡಿ ಹೋಗುತ್ತೇವೆ. ಅರಸೀಕೆರೆಯವರೇ ಬಂದು ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿಸಲಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.