ಶನಿವಾರ, ಡಿಸೆಂಬರ್ 5, 2020
25 °C
ಕಾಂಗ್ರೆಸ್‌ ಮುಖಂಡ ಬಾಗೂರು ಮಂಜೇಗೌಡ

ಹಾಸನ ಕ್ಷೇತ್ರದಿಂದ ಸ್ಪರ್ಧಿಸುವೆ: ಬಾಗೂರು ಮಂಜೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಕಾಂಗ್ರೆಸ್
ಮುಖಂಡ ಬಾಗೂರು ಮಂಜೇಗೌಡ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಒಂಬತ್ತು ವರ್ಷ ಆರ್‌ಟಿಒ ಅಧಿಕಾರಿಯಾಗಿದ್ದ ನಾನು
ಕ್ಷೇತ್ರದ ಜನರ ನಾಡಿ ಮಿಡಿತ ಅರಿತಿದ್ದೇನೆ. ಮೂಲ ಸಮಸ್ಯೆಗಳೇನು ಎಂಬುದರ ಬಗ್ಗೆ ಮಾಹಿತಿ ಇದೆ. 2018ರಲ್ಲಿಯೂ ಈ ಕ್ಷೇತ್ರದಿಂದಲೇ ಟಿಕೆಟ್‌ ಕೇಳಿದ್ದೆ. ಆದರೆ ಹೈಕಮಾಂಡ್‌ ಹೊಳೆನರಸೀಪುರದಿಂದ ಸ್ಪರ್ಧಿಸಲು ಸೂಚಿಸಿತ್ತು’ ಎಂದರು.

‘ಈ ಬಾರಿ ಹಾಸನ ಕ್ಷೇತ್ರವೇ ಆದ್ಯತೆ ಆಗಿದ್ದು, ಈಗಿನಿಂದಲೇ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ನಗರದಲ್ಲೇ ಮನೆ ಹಾಗೂ ಕಚೇರಿ ಮಾಡಿಕೊಂಡಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೂ ಮನದಾಸೆ ಹೇಳಿದ್ದೇನೆ. ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೂ ಮನವರಿಕೆ ಮಾಡಿದ್ದೇನೆ’ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.