ಸೋಮವಾರ, ಅಕ್ಟೋಬರ್ 18, 2021
24 °C
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ

ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ: ಮಧು ಮಾದೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಜೂನ್ ತಿಂಗಳಲ್ಲಿ ನಡೆಯಲಿರುವ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಮತದಾರರು ತಮನ್ನು ಬೆಂಬಲಿಸಬೇಕು ಎಂದು ಮುಖಂಡ ಮಧು ಜಿ ಮಾದೇಗೌಡ ಮನವಿ ಮಾಡಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಅರಿವಿದ್ದು,  ಆ ಸಮಸ್ಯೆಗಳಿಗೆ ಧ್ವನಿಯಾಗುವ ನಿಟ್ಟಿನಲ್ಲಿ ಸ್ಪರ್ಧೆಗೆ ಇಳಿದಿದ್ದೇನೆ. ಈಗಾಗಲೇ ಅರಸೀಕೆರೆ, ಚನ್ನರಾಯಪಟ್ಟಣ, ಹಾಸನ ತಾಲ್ಲೂಕುಗಳ ವಿವಿಧ ಪದವಿ ಕಾಲೇಜುಗಳಿಗೆ ಭೇಟಿ ನೀಡಿದ್ದು, ಉತ್ತಮ ಬೆಂಬಲ ವ್ಯಕ್ತವಾಗಿದೆ ಎಂದು ಹೇಳಿದರು.

ಕಳೆದ ಚುನಾವಣೆಯಲ್ಲಿ ಸುಮಾರು 23 ಸಾವಿರ ಮತದಾರರು ಪಾಲ್ಗೊಂಡಿದ್ದರು. ಈಗಾಗಲೇ ಮತದಾರರ ನೋಂದಣಿ ಆರಂಭವಾಗಿದ್ದು, ನ.6 ಕಡೆ ದಿನ. ಆಧಾರ್ ಕಾರ್ಡ್, ಪದವಿ ಪ್ರಮಾಣ ಪತ್ರ, ಮೂರು ಭಾವಚಿತ್ರಗಳನ್ನು ನಮೂದಿಸಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

‘ತಂದೆ ಜಿ. ಮಾದೇಗೌಡ ಅವರು ಕಾವೇರಿ ಹೋರಾಟ ಸೇರಿದಂತೆ ಅನೇಕ ಸಾಮಾಜಿಕ ಹೋರಾಟಗಳಲ್ಲಿ ಭಾಗವಹಿಸಿದ್ದರು. ಬಿಜೆಪಿ ಆಡಳಿತ ಅವಧಿಯಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರು, ಹಿರಿಯ ನಾಗರಿಕರು ಸೇರಿದಂತೆ ಅನೇಕರು ವಿವಿಧ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಮೋದಿ ನೀಡಿದ ಭರವಸೆ ಸುಳ್ಳಾಗಿದೆ. ಚುನಾವಣೆಯಲ್ಲಿ ಬೆಂಬಲಿಸಿದರೆ ಅದಕ್ಕೆ ಪೂರಕವಾಗಿ ಶಿಕ್ಷಣ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬದಲಾವಣೆ ತರಲಾಗುವುದು’ ಎಂದು ಭರವಸೆ ನೀಡಿದರು.

ಕಾಂಗ್ರೆಸ್ ಮುಖಂಡರಾದ ಬಾಗೂರು ಮಂಜೇಗೌಡ, ಎಚ್.ಕೆ.ಮಹೇಶ್, ವಿಶ್ವನಾಥ್, ಹರೀಶ್ , ಚೇತನ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು