ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಂತ್ವನ ಮಹಿಳಾ ಸಹಾಯವಾಣಿ ಮುಂದುವರೆಸಿ: ಮಹಿಳಾ ಸಾಂತ್ವನ ಕೇಂದ್ರಗಳ ಒಕ್ಕೂಟ

ಮುಖ್ಯಮಂತ್ರಿ ಯಡಿಯೂರಪ್ಪಗೆ ಸಾಂತ್ವನ ಕೇಂದ್ರಗಳ ಒಕ್ಕೂಟ ಮನವಿ
Last Updated 11 ಜೂನ್ 2021, 12:32 IST
ಅಕ್ಷರ ಗಾತ್ರ

ಹಾಸನ: ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ 194 ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಗಳನ್ನು ಸ್ಥಗಿತಗೊಳಿಸದೇ, ಮುಂದುವರೆಸಬೇಕು ಎಂದು ಆಗ್ರಹಿಸಿ ರಾಜ್ಯ ಮಹಿಳಾಸಾಂತ್ವನ ಕೇಂದ್ರಗಳ ಒಕ್ಕೂಟ ಆಗ್ರಹಿಸಿದೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶುಕ್ರವಾರ ಮನವಿಸಲ್ಲಿಸಿದ ಒಕ್ಕೂಟದ ಸದಸ್ಯರು, ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆದ ತಕ್ಷಣ ಅವರಕಷ್ಟಕ್ಕೆ ಸ್ಪಂದಿಸುತ್ತಿದ್ದ, ದಿನದ 24 ಗಂಟೆ ಸೇವೆ ಒದಗಿಸುತ್ತಿದ್ದ 71 ಕೇಂದ್ರಗಳನ್ನುಸ್ಥಗಿತಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಕೇಂದ್ರಗಳಿಂದ ದೌರ್ಜನ್ಯಕ್ಕೆ ಒಳಗಾದ ಸಹಸ್ರಾರು ಮಹಿಳೆಯರಿಗೆ ಅನುಕೂಲವಾಗುತ್ತದೆ. ಅಲ್ಲದೆ, ಇಲ್ಲಿ ಹತ್ತಿಪ್ಪತ್ತುವರ್ಷದಿಂದ ಕಾರ್ಯ ನಿರ್ವಸುತ್ತಿರುವ ಸುಮಾರು 300 ಮಹಿಳಾ ಸಿಬ್ಬಂದಿನಿರುದ್ಯೋಗಿಗಳಾಗುತ್ತಾರೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಯೋಜನೆಯಾದ ಸಖಿ-ಒನ್ ಸ್ಟಾಪ್ ಸೆಂಟರ್‌ಗಳು, ಸ್ವಾಧಾರಗೃಹ, ಉಜ್ವಲ, ರಾಜ್ಯ ಮಹಿಳಾ ನಿಲಯ, ಸ್ವೀಕಾರ ಕೇಂದ್ರ,ಕೌಟುಂಬಿಕ ಸಲಹಾ ಕೇಂದ್ರಗಳುಇರುವ ಕಾರಣ 71 ತಾಲ್ಲೂಕು ಮಟ್ಟದ ಸಾಂತ್ವನ ಕೇಂದ್ರಗಳನ್ನು ಏ.1ರಿಂದಸ್ಥಗಿತಗೊಳಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಆದರೆ, ಕೇಂದ್ರ ಯೋಜನೆಗಳಿಗೂ ಸಾಂತ್ವನ ಯೋಜನೆಗೂ ಸಾಮ್ಯತೆ ಇಲ್ಲ ಎಂದುಸದಸ್ಯರು ಸ್ಪಷ್ಟಪಡಿಸಿದ್ದಾರೆ.

ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಅತ್ಯಾಚಾರ, ಲೈಂಗಿಕ ಕಿರುಕುಳ, ಇನ್ನಿತರೆ ರೀತಿಯ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರು ದೈಹಿಕ ಮತ್ತು ಮಾನಸಿಕ ಹಿಂಸೆ ನುಭವಿಸುವುದಲ್ಲದೆ, ಸಾಮಾಜಿಕ ಹಾಗೂ ಆರ್ಥಿಕವಾಗಿ ತೊಂದರೆ ಅನುಭವಿಸುತ್ತಿರುವುದನ್ನು ಮನಗಂಡ ಸರ್ಕಾರ ಅಂತಹ ಮಹಿಳೆಯರಿಗೆ ತಕ್ಷಣದ ಪರಿಹಾರ ಹಾಗೂ ಸಾಂತ್ವನ ನೀಡಲು 2001ರಲ್ಲಿ 194 ಸಾಂತ್ವನ ಕೇಂದ್ರಗಳನ್ನು ತೆರೆಯಲಾಗಿತ್ತು.

ಸಾಂತ್ವನ ಕೇಂದ್ರಗಳನ್ನು ಯಥಾಸ್ಥಿತಿಯಲ್ಲಿ ಮುಂದುವರೆಸುವಂತೆ ಮುಖ್ಯಮಂತ್ರಿಶಿಫಾರಸ್ಸು ಮಾಡಿದರೂ ಹಣಕಾಸು ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣಇಲಾಖೆ ಮುಚ್ಚುವ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ. ಕೂಡಲೇ ಆದೇಶ ವಾಪಸ್‌ಪಡೆದು ಸಾಂತ್ವನ ಕೇಂದ್ರಗಳನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಮನವಿ ಸ್ವೀಕರಿಸಿದ ಸಿ.ಎಂ, ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ನಿಯೋಗದಲ್ಲಿ ಒಕ್ಕೂಟದ ಸದಸ್ಯರಾದ ನವೀನ, ಸಾವಿತ್ರಮ್ಮ, ದಿವ್ಯಾ, ಹೇಮ, ಭಾರತಿ ಇದ್ದರು. ‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT