ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಡುಗೆ ಸಹಾಯಕಿ ಈಗ ಗ್ರಾಮ ಪಂಚಾಯಿತಿ ಅಧ್ಯಕ್ಷೆ

Published 27 ಜುಲೈ 2023, 19:52 IST
Last Updated 27 ಜುಲೈ 2023, 19:52 IST
ಅಕ್ಷರ ಗಾತ್ರ

ಆಲೂರು (ಹಾಸನ): ಇಲ್ಲಿನ ಬಾಲಕಿಯರ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಅಡುಗೆ ಸಹಾಯಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ರಾಜೇಶ್ವರಿ ಅವರು ಮಡಬಲು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಗುರುವಾರ ಅವಿರೋಧವಾಗಿ ಆಯ್ಕೆಯಾದರು.

ದಲಿತರೂ ಆದ ಅವರು ಏಳೆಂಟು ವರ್ಷಗಳಿಂದ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಉಪಾಧ್ಯಕ್ಷರಾಗಿ ವೇದರಾಜ್ ಸಹ ಅವಿರೋಧವಾಗಿ ಆಯ್ಕೆಯಾದರು.

ನೂತನ ಅಧ್ಯಕ್ಷೆ ಮತ್ತು ಉಪಾಧ್ಯಕ್ಷರನ್ನು ಶಾಸಕ ಸಿಮೆಂಟ್ ಮಂಜು, ಬಿಜೆಪಿ ಮುಖಂಡರಾದ ಕಣಗಾಲ್ ಲೋಕೇಶ್, ಅಜಿತ್ ಚಿಕ್ಕಣಗಾಲ್, ಗ್ರಾ.ಪಂ ಮಾಜಿ ಅಧ್ಯಕ್ಷ ಗಿರೀಶ್, ತುಂಗೇಶ್ ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT