ಮಂಗಳವಾರ, ಅಕ್ಟೋಬರ್ 27, 2020
25 °C

ರಾಮಮಂದಿರ: ದೇಣಿಗೆ ಸಂಗ್ರಹಕ್ಕೆ ಕೊರೊನಾ ಅಡ್ಡಿ; ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಕೊರೊನಾದಿಂದಾಗಿ ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹ ಆಂದೋಲನಕ್ಕೆ ಹಿನ್ನಡೆಯಾಗಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ನಗರದ ಎಂ.ಜಿ. ರಸ್ತೆಯಲ್ಲಿರುವ ರ್ರಾ‍ಘವೇಂದ್ರ ಮಠಕ್ಕೆ ಶನಿವಾರ ಭೇಟಿ ನೀಡಿದ ವೇಳೆ ಸುದ್ದಿಗಾರರ ಜತೆ
ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಎಸ್‌ಬಿಐ
ಬ್ಯಾಂಕ್‌ನಲ್ಲಿ ಖಾತೆ ತೆರೆಯಲಾಗಿದ್ದು, ದಾನಿಗಳು ಹಣವನ್ನು ನೇರವಾಗಿ ಬ್ಯಾಂಕ್‌ ಖಾತೆಗೆ ಜಮಾ ಮಾಡಲು
ವ್ಯವಸ್ಥೆ ಮಾಡಲಾಗಿದೆ. ಕೋವಿಡ್‌ ಪ್ರಕರಣ ಹೆಚ್ಚುತ್ತಿರುವ ಕಾರಣ ಅಯೋಧ್ಯೆಗೆ ಹೋಗಲು ಆಗಿಲ್ಲ ಎಂದರು.

ಕೋವಿಡ್‌ನಿಂದಾಗಿ ಕೆಲಸ ವಿಳಂಬವಾಗಿದೆ. ದೇಣಿಗೆ ಸಂಗ್ರಹಕ್ಕಾಗಿ ಮುಂದಿನ ದಿನಗಳಲ್ಲಿ ತಿಂಗಳು ಕಾಲ
ವಿಶೇಷ ಆಂದೋಲನ ಮಾಡಲಾಗುವುದು. ನಕಲಿ ಚೆಕ್‌ಗಳನ್ನು ಬಳಸಿ ರಾಮಮಂದಿರ ಟ್ರಸ್ಟ್‌ ಬ್ಯಾಂಕ್‌ನಿಂದ
ಹಣ ವರ್ಗಾವಣೆ ಆಗಿರುವ ಬಗ್ಗೆ ಕೇಳಿದ್ದೇನೆ. ಇ-ಬ್ಯಾಂಕಿಂಗ್‌ ವ್ಯವಸ್ಥೆಯಲ್ಲಿ ಈ ತರಹ ಆಗುವುದು ಉಂಟು.
ಮುಂದೆ ಆ ರೀತಿ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಮಂದಿರ ನಿರ್ಮಾಣಕ್ಕಾಗಿಯೇ ಪ್ರತ್ಯೇಕ
ಸಮಿತಿ ರಚಿಸಿ, ಜವಾಬ್ದಾರಿ ನೀಡಲಾಗಿದೆ ಎಂದರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು