ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ | ತ್ರಿಶತಕ ಬಾರಿಸಿದ ಕೊರೊನಾ ಸೋಂಕು

ಮತ್ತೆ ಮೂರು ಮಂದಿ ಸಾವು, ಸಕ್ರಿಯ ಪ್ರಕರಣ ಏರಿಕೆ
Last Updated 28 ಆಗಸ್ಟ್ 2020, 1:07 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಗುರುವಾರ ದಾಖಲೆ ಪ್ರಮಾಣದಲ್ಲಿ 325 ಪ್ರಕರಣಗಳೊಂದಿಗೆ ಸೋಂಕಿತರ ಸಂಖ್ಯೆ 6856ಕ್ಕೆ ಏರಿಕೆಯಾಗಿದೆ. ಮೂವರು ಸೋಂಕಿತರ ಸಾವಿನೊಂದಿಗೆ ಮೃತ ಸಂಖ್ಯೆ 175 ತಲುಪಿದೆ.

2066 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ರೋಗ ಲಕ್ಷಣ ಇಲ್ಲದ ಸೋಂಕಿತರು ಹೋಂ ಐಸೋಲೆಷನ್‌ನಲ್ಲಿದ್ದರೆ, 60 ಸೋಂಕಿತರು ಗಂಭೀರ ಆರೋಗ್ಯ ಸಮಸ್ಯೆಯಿಂದ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 233 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಈವರೆಗೂ 4615 ಮಂದಿ ಗುಣಮುಖರಾಗಿದ್ದಾರೆ.

ಹಾಸನದಲ್ಲಿ ಕೊರೊನಾ ಆರ್ಭಟ ಹೆಚ್ಚಿದ್ದು, 142 ಹೊಸ ಪ್ರಕರಣಗಳು ವರದಿಯಾಗುವ ಮೂಲಕ ಸೋಂಕಿತರ ಸಂಖ್ಯೆ
2771 ತಲುಪಿದೆ. ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಚನ್ನರಾಯಪಟ್ಟಣ ಇಬ್ಬರು, ಅರಕಲಗೂಡಿನ ಒಬ್ಬರು ಮೃತಪಟ್ಟಿದ್ದಾರೆ.

ಹೊಸದಾಗಿ ಅರಸೀಕೆರೆ ತಾಲ್ಲೂಕಿನ 10, ಮಂದಿ ಚನ್ನರಾಯಪಟ್ಟಣ 35, ಆಲೂರು 9 , ಹಾಸನ 142, ಹೊಳೆನರಸೀಪುರ 29, ಅರಕಲಗೂಡು 55, ಬೇಲೂರು 32 ಹಾಗೂ ಸಕಲೇಶಪುರ ತಾಲ್ಲೂಕಿನ 13 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಸಾಕಷ್ಟು ಎಚ್ಚರಿಕೆ
ವಹಿಸಬೇಕು. ಮಾಸ್ಕ್‌ ಧರಿಸುವುದು, ಅಂತರ ಪಾಲನೆ ಕಡ್ಡಾಯ. ಸಭೆ ಸಮಾರಂಭಗಳಿಗೆ ಭಾಗವಹಿಸುವುದನ್ನು ಆದಷ್ಟು ಕಡಿಮೆ ಮಾಡಬೇಕು. ಶೀತ, ಕೆಮ್ಮು, ಜ್ವರ ಲಕ್ಷಣ ಇದ್ದರೆ ಸಮೀಪದ ಆರೋಗ್ಯ ಕೇಂದ್ರಕ್ಕೆ ಹೋಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT