ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಕಸಾಪ ಚುನಾವಣೆಗೆ ಕ್ಷಣಗಣನೆ

ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ನಾಲ್ವರ ಸ್ಪರ್ಧೆ, ಮನವೊಲಿಕೆಗೆ ಕೊನೆ ಕ್ಷಣದ ಕಸರತ್ತು
Last Updated 20 ನವೆಂಬರ್ 2021, 15:54 IST
ಅಕ್ಷರ ಗಾತ್ರ

ಹಾಸನ: ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಚುನಾವಣೆ ನ.21ರಂದು ನಡೆಯಲಿದ್ದು, ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ.ಅಧ್ಯಕ್ಷರ ಅಧಿಕಾರವಧಿ 5 ವರ್ಷ.

ಬೆಳಿಗ್ಗೆ 8 ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. ಸಂಜೆ 4ರ ನಂತರ ಮತ ಎಣಿಕೆಆರಂಭವಾಗಲಿದೆ. ತಾಲ್ಲೂಕುಗಳಿಂದ ಬರುವ ಮಾಹಿತಿಯನ್ನು ಕ್ರೋಢೀಕರಿಸಿ ರಾತ್ರಿ 8ರ ವೇಳೆಗೆಫಲಿತಾಂಶ ಪ್ರಕಟಗೊಳ್ಳುವ ನಿರೀಕ್ಷೆ ಇದೆ.

ನಿವೃತ್ತ ಪ್ರಾಧ್ಯಾಪಕ ಎಚ್‌.ಎಲ್‌.ಮಲ್ಲೇಶ್‌ಗೌಡ, ಕನ್ನಡ ಸಾಹಿತ್ಯ ಪರಿಷತ್‌ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಗಂಜಲಗೂಡು ಗೋಪಾಲಗೌಡ, ಶಿಕ್ಷಕಿ ಮಮತಾ ಅರಸೀಕೆರೆ, ಪತ್ರಕರ್ತರಾದ ರವಿ ನಾಕಲಗೋಡು, ಆರ್.ಕೆ.ಶರ್ಮಾ ಸೇರಿದಂತೆ ಐವರು ಕಣದಲ್ಲಿದ್ದಾರೆ. ವೈಯಕ್ತಿಕ ಕಾರಣಕ್ಕೆ ಆರ್‌.ಕೆ.ಶರ್ಮಾ ಕಣದಿಂದ ನಿವೃತ್ತರಾಗಿದ್ದರೆ, ಮಮತಾ ಅವರು ಕೆಲಸದ ಒತ್ತಡದಿಂದ ಹೆಚ್ಚು ಪ್ರಚಾರದಲ್ಲಿ ತೊಡಗಿಸಿಕೊಂಡಿಲ್ಲ.

ಅಭ್ಯರ್ಥಿಗಳು ಮತದಾರರ ಮನವೊಲಿಕೆಗೆ ಕೊನೆ ಕ್ಷಣದ ಕಸರತ್ತು ನಡೆಸುತ್ತಿದ್ದಾರೆ. ಅಲ್ಲದೇವಾಟ್ಸ್‌ ಆ್ಯಪ್‌, ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ಸಾಲತಾಣವನ್ನು ಪ್ರಚಾರಕ್ಕೆಬಳಸಿಕೊಂಡಿದ್ದಾರೆ.

ಚುನಾವಣೆಯಲ್ಲಿ ಮತದಾರರನ್ನು ತಮ್ಮತ್ತ ಸೆಳೆಯಲು ಆಶ್ವಾಸನೆಗಳನ್ನು ನೀಡುತ್ತ, ಅನೇಕವಿಷಯಗಳ ಚರ್ಚೆ ನಡೆಯುತ್ತಿದೆ. ಜೊತೆಗೆ ಪರಸ್ಪರ ಆರೋಪ, ಪ್ರತ್ಯಾರೋಪದಲ್ಲೂತೊಡಗಿದ್ದಾರೆ.

ಜಿಲ್ಲೆಯಲ್ಲಿ ಪುರುಷರು, ಮಹಿಳೆಯರು ಸೇರಿ ಒಟ್ಟು 13,170 ಮತದಾರರಿದ್ದಾರೆ. ಹಾಸನತಾಲ್ಲೂಕಿನಲ್ಲಿ ಅತಿ ಹೆಚ್ಚು ಅಂದರೆ 5,660, ನಂತರದ ಸ್ಥಾನದಲ್ಲಿ ಚನ್ನರಾಯಪಟ್ಟಣ ತಾಲ್ಲೂಕಿದೆ.ಅಲ್ಲಿ 3,013 ಮಂದಿ ಮತದಾನದ ಹಕ್ಕು ಹೊಂದಿದ್ದಾರೆ. ಆಲೂರು ತಾಲ್ಲೂಕಿನಲ್ಲಿ ಅತ್ಯಂತ ಕಡಿಮೆ (493) ಮತದಾರರಿದ್ದಾರೆ.

ಸುಗಮ ಮತದಾನಕ್ಕಾಗಿ ಜಿಲ್ಲೆಯಲ್ಲಿ 15 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಹಾಸನದಲ್ಲಿ ಆರು,ಚನ್ನರಾಯಪಟ್ಟಣದಲ್ಲಿ 3, ಆಲೂರು, ಬೇಲೂರು, ಅರಕಲಗೂಡು, ಅರಸೀಕೆರೆ, ಹೊಳೆನರಸೀಪುರಹಾಗೂ ಸಕಲೇಶಪುರದಲ್ಲಿ ತಲಾ 1 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

‘ಜಿಲ್ಲೆಯಲ್ಲಿ ಒಟ್ಟು 15 ಮತಗಟ್ಟೆಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ತಾಲ್ಲೂಕು ಕೇಂದ್ರಗಳಲ್ಲಿ ಮತದಾನ ನಡೆಯಲಿದೆ. ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಬಂದಿರುವ ಮತಗಳವಿವರವನ್ನು ಕೇಂದ್ರ ಕಚೇರಿಗೆ ಕಳುಹಿಸಲಾಗುವುದು’ ’ ಎಂದು ಚುನಾವಣಾಧಿಕಾರಿಯೂಆಗಿರುವ ಹಾಸನ ತಹಶೀಲ್ದಾರ್‌ ನಟೇಶ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT