ಕಾಲ ಕೂಡಿ ಬಂದಿಲ್ಲ..
ನ್ಯಾಯಾಲಯ ಸಂಕೀರ್ಣವನ್ನು ಹೈಕೋರ್ಟ್ ನ್ಯಾಯಾಧೀಶರು, ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 26ರಂದು ಲೋಕಾರ್ಪಣೆ ಮಾಡಬೇಕಿತ್ತು. ಆದರೆ ಕೆಲ ತಾಂತ್ರಿಕ ಕಾರಣದಿಂದ ಸಾಧ್ಯವಾಗಿರಲಿಲ್ಲ. ಅಗಸ್ಟ್, ಸೆಪ್ಟೆಂಬರ್‌ಗೆ ಮುಂದೂಡಲಾಗಿತ್ತು. ಇದೀಗ ಹೊಸವರ್ಷದ ಹೊಸ್ತಿಲಿನಲ್ಲಿದ್ದರೂ ಕಟ್ಟಡವು ಸಾರ್ವಜನಿಕರ ಸೇವೆಗೆ ಸಮರ್ಪಣೆಯಾಗುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ ಎಂಬುದು ಬಳಕೆದಾರರ ಅಸಮಾಧಾನಕ್ಕೆ ಕಾರಣವಾಗಿದೆ.