ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಹಿಮ್ಸ್‌ಗೆ 30 ವೆಂಟಿಲೇಟರ್, 25 ಆಮ್ಲಜನಕ ಸಾಂಧ್ರಕ

Last Updated 24 ಮೇ 2021, 5:48 IST
ಅಕ್ಷರ ಗಾತ್ರ

ಹಾಸನ: ರಾಜ್ಯ ಸರ್ಕಾರದಿಂದ ಜಿಲ್ಲೆಗೆ 30 ವೆಂಟಿಲೇಟರ್ ಹಾಗೂ 25 ಆಕ್ಸಿಜನ್ ಕಾನ್ಸೆನ್‍ಟ್ರೇಟರ್‌ಗಳನ್ನು ಭಾನುವಾರ ಹಿಮ್ಸ್‌ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ತುರ್ತಾಗಿ 50 ವೆಂಟಿಲೇಟರ್ ಹಾಗೂ ಆಕ್ಸಿಜನ್ ಕಾನ್ಸೆನ್‍ಟ್ರೇಟರ್ ನೀಡುವಂತೆ ಜಿಲ್ಲಾಡಳಿತದಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು. ಈ ಬಗ್ಗೆ ವಾರದ ಹಿಂದೆ ಜಿಲ್ಲೆಗೆ ಆಗಮಿಸಿದ್ದ ಆರೋಗ್ಯ ಸಚಿವ ಡಾ.ಸುಧಾಕರ್ ಅವರಿಗೆ ಜಿಲ್ಲೆಯ ಎಲ್ಲಾ ಶಾಸಕರು ಮನವಿ ಸಲ್ಲಿಸಿದ್ದರು. ಈ ವೇಳೆ ಶೀಘ್ರದಲ್ಲೇ ವೆಂಟಿಲೇಟರ್ ಕಳಹಿಸುವುದಾಗಿ ಸುಧಾಕರ್ ಭರವಸೆ ನೀಡಿದ್ದರು. ಅಲ್ಲದೆ ಶನಿವಾರ ಜಿಲ್ಲೆಗೆ ಆಗಮಿಸಿದ್ದ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರಿಗೂ ವೆಂಟಿಲೇಟರ್ ಹಾಗೂ ಎಸ್‍ಡಿಆರ್‌ಎಫ್ ನಿಧಿಯಡಿ ₹ 10 ಕೋಟಿ ಬಿಡುಗಡೆ ಮಾಡುವಂತೆ ಜಿಲ್ಲೆಯ ಎಲ್ಲಾ ಶಾಸಕರು ಒಕ್ಕೊರಲಿನಿಂದ ಒತ್ತಾಯ ಮಾಡಿದ್ದರು.

ಸಭೆ ಮುಗಿದ ನಂತರ ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ಕರೆ ಮಾಡಿದ ಡಿಸಿಎಂ ತಕ್ಷಣವೇ ಜಿಲ್ಲೆಗೆ ಅಗತ್ಯ ಇರುವಷ್ಟು ವೆಂಟಿಲೇಟರ್‌ಗಳನ್ನು ಒದಗಿಸುವಂತೆ ಸೂಚಿಸಿದ್ದರು. ಅಲ್ಲದೆ, ಸಭೆ ಮುಗಿಸಿಕೊಂಡು ಬೆಂಗಳೂರಿಗೆ ಹೊರಟ ಡಿಸಿಎಂ, ಮಾರ್ಗ ಮಧ್ಯೆಯೇ ಮತ್ತೊಮ್ಮೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ಕೊಟ್ಟು ವೆಂಟಿಲೇಟರ್‌ಗಳು ಬೆಂಗಳೂರಿನಿಂದ ಹಾಸನ ತಲುಪುವ ತನಕ ನಿರಂತರ ಫಾಲೋ ಅಪ್ ಮಾಡಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಡಾ.ಅಶ್ವತ್ಥ್‌ ನಾರಾಯಣ ಅವರು, ‘ಕೋವಿಡ್‌ ಸೋಂಕಿತರಿಗೆ ವೆಂಟಿಲೇಟರ್‌ಗಳ ಅಗತ್ಯ ಹೆಚ್ಚಾಗಿರುತ್ತದೆ. ಸ್ಥಳೀಯ ಮಟ್ಟದಲ್ಲೇ ಜೀವ ಉಳಿಸಬಹುದು. ಶನಿವಾರ ಹಾಸನ ಜಿಲ್ಲೆಯ ಪರಿಸ್ಥಿತಿ ಪರಿಶೀಲನೆ ಮಾಡಿದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ಪರಿಸ್ಥಿತಿಯ ತೀವ್ರತೆ ಗೊತ್ತಾಯಿತು. 24 ಗಂಟೆಗಳಲ್ಲಿಯೇ 30 ವೆಂಟಿಲೇಟರ್‌ಗಳನ್ನು ಹಾಸನಕ್ಕೆ ಕಳಿಸಿಕೊಟ್ಟಿದ್ದೇವೆ. ಇಂಥ ಸಂಕಷ್ಟ ಸಮಯದಲ್ಲಿ ಕ್ಷಿಪ್ರವಾಗಿ ಕೆಲಸ ಮಾಡಬೇಕಾದುದು ನಮ್ಮೆಲ್ಲರ ಜವಾಬ್ದಾರಿ’ ಎಂದು ತಿಳಿಸಿದ್ದಾರೆ.

ಶಾಸಕ ಪ್ರೀತಂ ಜೆ. ಗೌಡ ಅವರು ಕೂಡಾ ಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣ ಕಡಿಮೆ ಮಾಡಲು 50 ವೆಂಟಿಲೇಟರ್ ಹಾಗೂ 500 ಆಕ್ಸಿಜನ್ ಕಾನ್ಸೆನ್‍ಟ್ರೇಟರ್ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿ ಆರೋಗ್ಯ ಸಚಿವ ಡಾ. ಸುಧಾಕರ್ ಅವರೊಂದಿಗೆ ನಿರಂತರ ಸಂಪರ್ಕ ಸಾಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT