ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: 8 ಮಂದಿ ಸಾವು

Last Updated 23 ಏಪ್ರಿಲ್ 2021, 13:47 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ 244 ಕೋವಿಡ್‌ 19 ಪ್ರಕರಣಗಳು ಪತ್ತೆಯಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಎಂಟು ಮಂದಿ ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 34050 ಕ್ಕೆ ಏರಿಕೆಯಾಗಿದ್ದು, 30368 ಜನರ ಆರೋಗ್ಯದಲ್ಲಿ ಚೇತರಿಕೆಯಾಗಿದೆ. ಇನ್ನು 3163 ಸಕ್ರಿಯ ಪಕ್ರಣಗಳ ಪೈಕಿ 46 ಜನರು ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ. ಕಾಯಿಲೆಯಿಂದ ಈವರೆಗೆ 519 ಜನರು ಅಸುನೀಗಿದ್ದಾರೆ.

ಹೊಸದಾಗಿ ಆಲೂರು ತಾಲ್ಲೂಕಿನಲ್ಲಿ 10, ಅರಕಲಗೂಡು 18, ಅರಸೀಕೆರೆ 34, ಬೇಲೂರು 28, ಚನ್ನರಾಯಪಟ್ಟಣ 64, ಹಾಸನ 58, ಹೊಳೆನರಸೀಪುರ 13, ಸಕಲೇಶಪುರ 18, ಇತರೆ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‌ ಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT