ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

40 ಮಂದಿಗೆ ಕೋವಿಡ್ ; ವ್ಯಕ್ತಿ ಸಾವು

Last Updated 27 ಮಾರ್ಚ್ 2021, 14:20 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಹೊಸದಾಗಿ ಶನಿವಾರ 40 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈವರೆಗೆ ಸೋಂಕಿತರ ಸಂಖ್ಯೆ 29,242ಕ್ಕೆ ಏರಿಕೆಯಾಗಿದೆ.

ಕಾಯಿಲೆಯಿಂದಾಗಿ ಅರಸೀಕೆರೆ ತಾಲ್ಲೂಕಿನ ವ್ಯಕ್ತಿ ಮೃತಪಟ್ಟಿದ್ದು, ಈ ವರೆಗೆ ಜಿಲ್ಲೆಯಲ್ಲಿ 468 ಮಂದಿ
ಮೃತರಾಗಿದ್ದಾರೆ.

331 ಸಕ್ರಿಯ ಪ್ರಕರಣಗಳ ಪೈಕಿ ಜಿಲ್ಲಾ ಕೋವಿಡ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ 8 ಮಂದಿ ದಾಖಲಾಗಿದ್ದಾರೆ. ಶನಿವಾರ ಬಿಡುಗಡೆಯಾದ 25 ಮಂದಿ ಸೇರಿದಂತೆ ಈವರೆಗೆ 28,443 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಹೊಸದಾಗಿ ಆಲೂರು, ಅರಕಲಗೂಡು, ಹೊಳೆನರಸೀಪುರ ತಾಲ್ಲೂಕಿನ ತಲಾ ಇಬ್ಬರಿಗೆ, ಚನ್ನರಾಯಪಟ್ಟಣ, ಸಕಲೇಶಪುರ ತಾಲ್ಲೂಕಿನ ತಲಾ ಮೂವರಿಗೆ, ಹಾಸನ 17, ಅರಸೀಕೆರೆ 6 ಹಾಗೂ ಬೇಲೂರು ತಾಲ್ಲೂಕಿನ 5 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT