ಶನಿವಾರ, ಜುಲೈ 24, 2021
22 °C
ಸ್ವಯಂ ಗೃಹ ಬಂಧನಕ್ಕೆ ಒಳಪಟ್ಟ ಶಾಸಕ ಕೆ.ಎಂ.ಶಿವಲಿಂಗೇಗೌಡ

ಅರಸೀಕೆರೆ ಶಾಸಕರ ಪತ್ನಿಗೆ ಕೋವಿಡ್‌ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅರಸೀಕೆರೆ: ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡರ ಪತ್ನಿಗೆ ಕೋವಿಡ್ 19 ವೈರಸ್ ಸೋಂಕು ದೃಢಪಟ್ಟಿದ್ದು, ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಸ್ವಯಂಪ್ರೇರಣೆಯಿಂದ ಒಂದು ವಾರ ಹೋಮ್ ಕ್ವಾರಂಟೈನ್‌ನಲ್ಲಿಡಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಮಂಗಳವಾರ ಮಾಹಿತಿ ನೀಡಿದ ಅವರು, 4 ದಿನಗಳ ಹಿಂದೆ ನಾನು, ಪತ್ನಿ ಹಾಗೂ ನಮ್ಮ ಕಾರು ಚಾಲಕ ಮತ್ತು ಗನ್‌ಮ್ಯಾನ್ ಎಲ್ಲರೂ ಕೋವಿಡ್ 19 ವೈರಸ್ ನ ವೈದ್ಯಕೀಯ ಪರೀಕ್ಷೆಗೆ ಒಳಪಟ್ಟಿದ್ದೆವು. ಮೊದಲಿಗೆ ನಮ್ಮ ಪತ್ನಿಗೆ ಮೊದಲು ನೆಗೆಟಿವ್ ವರದಿ ಬಂದಿತ್ತು. ಪುನಃ ಇನ್ನೊಮ್ಮೆ ವೈದ್ಯಕೀಯ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಎಂದು ವರದಿ ಬಂದಿದೆ. ತಪಾಸಣೆಗೆ ಒಳಗಾದ ಉಳಿದವರ ವರದಿ ನೆಗೆಟಿವ್ ಬಂದಿದೆ. ಪತ್ನಿಯನ್ನು ಹಾಸನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು