ಶುಕ್ರವಾರ, ಸೆಪ್ಟೆಂಬರ್ 24, 2021
23 °C
ಪ್ರಾಥಮಿಕ ಸಂಪರ್ಕಿತರಿಗೂ ವಸತಿ ಗೃಹದಲ್ಲಿ ಕ್ವಾರಂಟೈನ್

ಹಾಸನ: 21 ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ನಗರದ ನರ್ಸಿಂಗ್ ಕಾಲೇಜಿನ  21 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ತಗುಲಿದೆ.

ಪರೀಕ್ಷೆಗೆ ಹಾಜರಾಗಲು ಕೇರಳದಿಂದ ಬಂದಿದ್ದ ನಗರದ ನಿಸರ್ಗ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಆರ್‌ಟಿ–ಪಿಸಿಆರ್ ಪರೀಕ್ಷೆ ಮಾಡಿದಾಗ, ಸೋಂಕು ಇರುವುದು ಗೊತ್ತಾಗಿದೆ. ಈ ಎಲ್ಲಾ ವಿದ್ಯಾರ್ಥಿಗಳು ಕೆ.ಆರ್.ಪುರಂ ನಲ್ಲಿರುವ ಅತಿಥಿ ಪಿ.ಜಿಯಲ್ಲಿ ವಾಸಿಸುತ್ತಿದ್ದಾರೆ.

ಸೋಂಕು ತಗುಲಿದ ವಿದ್ಯಾರ್ಥಿಗಳೊಂದಿಗೆ ಪ್ರಾಥಮಿಕ ಸಂರ್ಪಕದಲ್ಲಿದ್ದ 27 ವಿದ್ಯಾರ್ಥಿನಿಯರನ್ನು ಶ್ರೀರಂಗ ವಸತಿ ಗೃಹದಲ್ಲಿ ಕ್ವಾರಂಟೈನ್‌ ಮಾಡಿ, ಸೀಲ್‌ಡೌನ್‌ ಮಾಡಲಾಗಿದೆ. ಆರ್‌ಟಿ–ಪಿಸಿಆರ್‌ ಪರೀಕ್ಷೆ ಮಾಡಲಾಗಿದ್ದು, ಶುಕ್ರವಾರ ವರದಿ ಬರಲಿದೆ.

‘ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ 19 ದೃಢಪಟ್ಟಿರುವುದರಿಂದ ಕ್ವಾರಂಟೈನ್‌ ಮಾಡಲಾಗಿದೆ. ಈ ವಿದ್ಯಾರ್ಥಿಗಳು ಇಪ್ಪತ್ತು ದಿನಗಳ ಹಿಂದೆಯೇ ಬಂದಿದ್ದು, ಎಲ್ಲರೂ ಆರ್‌ಟಿ–ಪಿಸಿಆರ್‌ ನೆಗೆಟಿವ್‌ ವರದಿ ಪ್ರಮಾಣ ಪತ್ರ ಹಾಜರು ಪಡಿಸಿದ್ದಾರೆ. ಕೇರಳದಿಂದ ಜಿಲ್ಲೆಗೆ ಬರುವ ನರ್ಸಿಂಗ್ ವಿದ್ಯಾರ್ಥಿಗಳನ್ನು ಕೋವಿಡ್‌ ತಪಾಸಣೆಗೆ ಒಳಪಡಿಸಿ, ಪಾಸಿಟಿವ್ ಬಂದವರನ್ನು ಹೋಮ್ ಐಸೋಲೇಶನ್‍ನಲ್ಲಿ ಇರಿಸಲಾಗುತ್ತಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ಸತೀಶ್ ಕುಮಾರ್‌ ತಿಳಿಸಿದರು.

ನೆರೆಯ ಕೇರಳ, ಮಹಾರಾಷ್ಟ್ರದಲ್ಲಿ ಕೋವಿಡ್‌ ಸಾಂಕ್ರಮಿಕತೆಯ ಮೂರನೇ ಅಲೆಯ ಭೀತಿ ಎದುರಾಗಿದೆ. ಕೇರಳದಿಂದ ವಿದ್ಯಾಭ್ಯಾಸ, ವ್ಯಾಪಾರ ವಹಿವಾಟು, ಮತ್ತಿತರ ಕಾರಣಗಳಿಂದ ಜಿಲ್ಲೆಗೆ ನೂರಾರು ಜನರು ಭೇಟಿ ನೀಡುತ್ತಾರೆ. ಚನ್ನರಾಯಪಟ್ಟಣಕ್ಕೆ ನಿತ್ಯವೂ ಆರು ಬಸ್‌ಗಳು ಮುಂಬೈನಿಂದ ಬರುತ್ತಿವೆ. ಅರಸೀಕೆರೆ ರೈಲ್ವೆ ಜಂಕ್ಷನ್‌ಗೆ ಮುಂಬೈನಿಂದ ರೈಲುಗೆ ಬರುತ್ತವೆ. ಹಾಗಾಗಿ ಜಿಲ್ಲೆಯಲ್ಲಿ ಮೂರನೇ ಅಲೆ ಭೀತಿ ಹುಟ್ಟಿಸಿದೆ.

‘ಹೋಮ್‌ ಸ್ಟೇ ಮತ್ತು ರೆಸಾರ್ಟ್‌ಗಳಿಗೆ ಆಗಮಿಸುವ ಅತಿಥಿಗಳು 73 ಗಂಟೆ ಮುಂಚಿತವಾಗಿ ಪರೀಕ್ಷೆಗೆ ಒಳಪಟ್ಟ ಆರ್‌ಟಿ–ಪಿಸಿಆರ್‌ ನೆಗೆಟಿವ್‌ ವರದಿ ಇರುವ ಪ್ರಮಾಣ ಪತ್ರವನ್ನು ಹಾಜರುಪಡಿಸಬೇಕು. ಅರಸೀಕೆರೆ, ಚನ್ನರಾಯಪಟ್ಟಣ, ಅರಕಲಗೂಡು ರೈಲ್ವೆ ಮತ್ತು ಬಸ್‌ ನಿಲ್ದಾಣಗಳಿಗೆ ಹೊರ ರಾಜ್ಯಗಳಿಂದ ಬರುರವ ಪ್ರಯಾಣಿಕರನ್ನು ಗುರುತಿಸಿ ಆರ್‌ಟಿ–ಪಿಸಿಆರ್‌ ಪರೀಕ್ಷೆ ಮಾಡಲಾಗುತ್ತಿದೆ  ಹಾಗೂ ಅಂತಹ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.