ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂರು ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೋವಿಡ್‌

Last Updated 7 ಆಗಸ್ಟ್ 2021, 15:59 IST
ಅಕ್ಷರ ಗಾತ್ರ

ಹಾಸನ: ನಗರದ ನರ್ಸಿಂಗ್‌ ಕಾಲೇಜುಗಳ ನೂರು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಕೇರಳದಿಂದ ಬಂದ ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟ ಬಳಿಕ ಕೋವಿಡ್‌ ಪರೀಕ್ಷೆ ನಡೆಸಲಾಗುತ್ತಿದೆ. ನಗರದ 9 ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ನಡೆಸಿದ ಆರ್‌ಟಿ–‍ಪಿಸಿಆರ್‌ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ಗೊತ್ತಾಗಿದೆ. ಜುಲೈ 17 ರಿಂದ 30ರ ನಡುವೆ ಕೇರಳದಿಂದ ಬಂದ 48 ವಿದ್ಯಾರ್ಥಿಗಳ ಪೈಕಿ 31 ಜನರಿಗೆ ಕೊರೊನಾ ಪರೀಕ್ಷೆಯಲ್ಲಿ ಕೋವಿಡ್‌ ಪಾಸಿಟಿವ್‌ ಬಂದಿತ್ತು.

‘ಸೋಂಕಿತರ ಜತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 24 ಜನರನ್ನು ಪತ್ತೆ ಮಾಡಲಾಗಿತ್ತು. ನಗರದ 9 ನರ್ಸಿಂಗ್ ಕಾಲೇಜುಗಳಲ್ಲಿ 900 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಈವರೆಗೆ ನೂರು ಜನರಿಗೆ ಪಾಸಿಟಿವ್ ಬಂದಿದೆ. ಕೆಲವರು ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿಜಯ್‌ ಕುಮಾರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT