ಸೋಮವಾರ, ಜೂನ್ 27, 2022
26 °C
ಆಹಾರ ಪದಾರ್ಥ ಕಿಟ್‌ ವಿತರಿಸಿದ ಶಾಸಕ ಪ್ರೀತಂ ಗೌಡ

2 ಸಾವಿರ ಆಟೋ ಚಾಲಕರಿಗೆ ಕೋವಿಡ್ ಲಸಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಆದ್ಯತಾ ಗುಂಪಿನಲ್ಲಿರುವ ಆಟೋ ಚಾಲಕರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶನಿವಾರ ಶಾಸಕ ಪ್ರೀತಂ ಗೌಡ ಚಾಲನೆ ನೀಡಿದರು. 

ನೂರಾರು ಚಾಲಕರು ಸರದಿ ಸಾಲಿನಲ್ಲಿ ನಿಂತು ಜಿಲ್ಲಾ ಕ್ರಿಡಾಂಗಣದಲ್ಲಿ ಲಸಿಕೆ ಪಡೆದುಕೊಂಡರು. ಇದೇ ವೇಳೆ ಶಾಸಕರು ಆಟೋ ಚಾಲಕರಿಗೆ ವೈಯಕ್ತಿಕವಾಗಿ ಆಹಾರ ಕಿಟ್‍ಗಳನ್ನು ವಿತರಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರೀತಂ.  ‘ಆಟೋ ಚಾಲಕರಿಗೆ ಲಸಿಕೆ ಹಾಕುವ ಕಾರ್ಯಕ್ರಮವನ್ನು ಅಭಿಯಾನ ರೂಪದಲ್ಲಿ  ನಡೆಸಲಾಗುತ್ತಿದೆ. ಮೂರು ದಿನಗಳಲ್ಲಿ 2,000 ಮಂದಿಗೆ ಲಸಿಕೆ ನೀಡಲಾಗುತ್ತದೆ.
ಲಾಕ್ ಡೌನ್ ಸಡಿಲವಾದ ನಂತರ ಆಟೋ ಚಾಲಕರು ಸಾರ್ವಜನಿಕರ ಸೇವೆಯಲ್ಲಿ ತಿರುಗಾಡುವುದರಿಂದ ಆದ್ಯತೆ ಮೇರೆಗೆ ಲಸಿಕೆ ಹಾಕಲಾಗುತ್ತದೆ’ ಎಂದು ತಿಳಿಸಿದರು. 

‘ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ ಲಸಿಕೆ ನೀಡಲಾಗುತ್ತಿದೆ. ನಗರಸಭೆ ಅಧ್ಯಕ್ಷರ ನೇತೃತ್ವದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೂ ಶೀಘ್ರ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗುವುದು. ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿಯೂ ಆಟೊ ಚಾಲಕರಿಗೆ ಲಸಿಕೆ ನೀಡಬೇಕು’ ಎಂದು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಒಳಾಂಗಣ ಕ್ರೀಡಾಂಗಣ ಆವರಣದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಿದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.