ಶುಕ್ರವಾರ, ಆಗಸ್ಟ್ 12, 2022
24 °C

ಸಾಂತ್ವನ ಕೇಂದ್ರ ಮುಚ್ಚುವುದಿಲ್ಲ: ಸಚಿವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಸರ್ಕಾರದ ಅನುದಾಡಿ ನಡೆಯುತ್ತಿರುವ ಮಹಿಳಾ ಸಂತ್ವಾನ ಕೇಂದ್ರಗಳನ್ನು ಮುಚ್ಚುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 194 ಸಾಂತ್ವನ ಕೇಂದ್ರಗಳ ಪೈಕಿ 71 ಸಾಂತ್ವನ ಕೇಂದ್ರಗಳನ್ನು ಬಂದ್ ಮಾಡಲಾಗಿತ್ತು. ಕೇಂದ್ರಗಳು ನೊಂದವರ ಬಾಳಲ್ಲಿ ಬೆಳಕು ಮೂಡಿಸಲು ಯತ್ನಿಸುತ್ತಿವೆ. ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಮುಖ್ಯಮಂತ್ರಿ ಜತೆ ಚರ್ಚಿಸಿ ರದ್ದು ಆದೇಶವನ್ನು ಗುರುವಾರ ಹಿಂಪಡೆಯಲಾಗಿದೆ ಎಂದು ಸ್ಪಷ್ಟಪಡಿಸಿದರು.

ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡುವ ಕುರಿತು ಪ್ರಯೋಗ ನಡೆಯುತ್ತಿದೆ. ಯಶಸ್ವಿಯಾದ ಬಳಿಕ ಯಾವ ಹಂತದಲ್ಲಿ ಲಸಿಕೆ ನೀಡಬೇಕು ಎಂಬುದನ್ನು ತಜ್ಞರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ತೀವ್ರ ಅಪೌಷ್ಟಿಕತೆ ಒಳಗಾಗಿರುವ 89 ಮಕ್ಕಳಿದ್ದಾರೆ. ಅಪೌಷ್ಟಿಕ ಮಕ್ಕಳ ಮರು ಸಮೀಕ್ಷೆ ಮಾಡಲು ಜಿಲ್ಲಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಮವಹಿಸಬೇಕು. ಇಲಾಖೆ ವತಿಯಿಂದ ಮೊದಲು ನೀಡುತ್ತಿದ್ದ ಆಹಾರದ ಜೊತೆಗೆ ಪೌಷ್ಟಿಕಾಂಶ ಹೆಚ್ಚಿಸಲು ಕಿಟ್ ವಿತರಣೆಗೆ ಕ್ರಮ ವಹಿಸಲಾಗುವುದು. 620 ವಲಸೆ ಮಕ್ಕಳು ಮತ್ತು 120 ಗರ್ಭಿಣಿಯರಿಗೂ ಪೌಷ್ಟಿಕ ಆಹಾರ ಕಿಟ್‌ ವಿತರಿಸಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ 23 ಮಕ್ಕಳ ತಜ್ಞರ ಪೈಕಿ ಹತ್ತು ಹುದ್ದೆ ಖಾಲಿ ಇದೆ. ಆರೋಗ್ಯ ಸಚಿವರ ಜತೆ ಚರ್ಚಿಸಿ ಭರ್ತಿ ಮಾಡಲಾಗುವುದು. ಕಳೆದ ವರ್ಷ ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ 123 ದೂರುಗಳು ಬಂದಿದ್ದು, 79 ಮದುವೆಗಳನ್ನು ಅಧಿಕಾರಿಗಳು ತಡೆದಿದ್ದಾರೆ. 31 ಪ್ರಕರಣಗಳಲ್ಲಿ ಎಫ್‌ಐಆರ್‌ ಆಗಿದೆ ಎಂದು ನುಡಿದರು.

ಶಾಸಕ ಪ್ರೀತಂ ಗೌಡ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು