ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಕೋವಿಡ್‌ನಿಂದ ಮತ್ತೆ ನಾಲ್ಕು ಸಾವು, 188 ಜನ ಗುಣಮುಖ

290 ಜನರಿಗೆ ಕೊರೊನಾ ಪಾಸಿಟಿವ್
Last Updated 2 ಸೆಪ್ಟೆಂಬರ್ 2020, 14:31 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 290 ಜನರಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 8776 ಕ್ಕೆ ಏರಿಕೆಯಾಗಿದೆ. ನಾಲ್ಕು ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದು, ಮೃತರ ಸಂಖ್ಯೆ 204ಕ್ಕೆ ಏರಿಕೆಯಾಗಿದೆ.
ಲಾಕ್‌ಡೌನ್‌ ನಿಯಮ ಸಡಿಲಿಕೆ ಬೆನ್ನಲೇ ಸೋಂಕು ಪ್ರಕರಣ ಹೆಚ್ಚಿರುವುದು ಆತಂಕಕ್ಕೆ ಕಾರಣವಾಗಿದೆ.ಜಿಲ್ಲೆಯಲ್ಲಿ 2846 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಹೋಂ ಐಸೋಲೇಷನ್‌ ಹಾಗೂ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಡುಗಡೆಯಾದ 188 ಜನ ಸೇರಿ ಈವರೆಗೆ 5726 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 58 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜ್ವರ, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಹಾಸನ ತಾಲ್ಲೂಕಿನ ಇಬ್ಬರು, ಅರಕಲಗೂಡು ಮತ್ತು ಹೊಳೆನರಸೀಪುರ ತಾಲ್ಲೂಕಿನ ತಲಾ ಒಬ್ಬರು ಚಿಕಿತ್ಸೆಗೆ ಸ್ಪಂದಿಸಲಿಲ್ಲ. ನಿಯಮಾನುಸಾರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಹೊಸದಾಗಿ ಅರಸೀಕೆರೆ ತಾಲ್ಲೂಕಿನ 29, ಚನ್ನರಾಯಪಟ್ಟಣ 34, ಆಲೂರು 8 , ಹಾಸನ 127, ಹೊಳೆನರಸೀಪುರ 17, ಅರಕಲಗೂಡು 34, ಬೇಲೂರು 31, ಸಕಲೇಶಪುರ 10 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕಾಗಿ ಅಗತ್ಯ ಕ್ರಮ ಕೈಗೊಂಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರ್‍ಯಾಪಿಡ್‌ ಆ್ಯಂಟಿಜೆನ್‌ ಮೂಲಕ ನಿತ್ಯ 1,800 ಕೋವಿಡ್‌ ಟೆಸ್ಟ್‌ ನಡೆಸುತ್ತಿದೆ. ಸೋಂಕಿತ ವ್ಯಕ್ತಿಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆಗೆ ಹೆಚ್ಚು ನಿಗಾ ವಹಿಸಿದ್ದು, ಒಬ್ಬರಿಂದ ಮತ್ತೊಬ್ಬರಿಗೆ ಕೊರೊನಾ ಪಸರಿಸುವುದನ್ನು ತಡಗಟ್ಟಲು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚಿನ ಜವಾಬ್ದಾರಿ ವಹಿಸಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT