ಅರಸೀಕೆರೆ: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಲಘುವಾಗಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಸಚಿವ ಸಂಪುಟದಿಂದ ವಜಾ ಗೊಳಿಸಬೇಕು’ ಎಂದು ದಲಿತ ಪರ ಸಂಘಟನೆಗಳ ಮುಖಂಡರು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಮಾಜಿಕ ನ್ಯಾಯ ಸಮಿತಿ ಜಿಲ್ಲಾಧ್ಯಕ್ಷ ವೆಂಕಟೇಶ್, ‘ಅಂಬೇಡ್ಕರ್ ಒಂದು ಜಾತಿಗೆ ಸೀಮಿತವಾದವರಲ್ಲ. ಅವರು ರಚಿಸಿರುವ ಸಂವಿಧಾನ ಕೂಡ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಸತ್ವದ ಆಧಾರದ ಮೇಲೆ ಸಾಮಾಜಿಕ ನ್ಯಾಯ ಎತ್ತಿ ಹಿಡಿದಿದೆ. ಇಂತಹ ಮಹಾನ್ ಚೇತನದ ವಿರುದ್ಧವಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಅಮಿತ್ ಶಾ ಅವರು ಲಘುವಾಗಿ ಮಾತನಾಡಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಗುತ್ತಿನಕೆರೆ ಶಿವಮೂರ್ತಿ ಮಾತನಾಡಿ, ಅಮಿತ್ ಶಾ ವಿರುದ್ಧ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ ನಡೆಸಲು ದಲಿತಪರ ಸಂಘಟನೆಗಳು ತೀರ್ಮಾನಿಸಿದ್ದು ಜನವರಿ 8ರಂದು ಹಾಸನದ ಮೂಲಕ ಹಾದು ಹೋಗಿರುವ ಬೆಂಗಳೂರು ಹಾಗೂ ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಲು ದಲಿತ ಪರ ಸಂಘಟನೆಗಳ ಮುಖಂಡರು ಮುಂದಾಗಿದ್ದು ತಾಲ್ಲೂಕಿನಿಂದಲೂ ಅಂಬೇಡ್ಕರ್ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ದಲಿತ ಪರ ಸಂಘಟನೆಗಳ ಮುಖಂಡರಾದ ಸಂಕೋಡನಹಳ್ಳಿ ಮಂಜು.ಕೆ, ಆನಂದ್,ಮಾಡಾಳು ರಂಗನಾಥ್, ಅಣ್ಣಾದೊರೆ, ಬಾಲಮುರುಗನ್,ರಘು,ಸ್ವಾಮಿ,ಹಾಗೂ ಸಾಮಾಜಿಕ ಕಾರ್ಯಕರ್ತ ರತ್ನ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.