ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನಾಂಬೆ ದರ್ಶನ; ಸಾರ್ವಜನಿಕರಿಗೂ ಅವಕಾಶ

ಕೋವಿಡ್‌ ಲಸಿಕೆ ಪಡೆದ ಪ್ರಮಾಣ ಪತ್ರ ಹಾಜರಿ ಕಡ್ಡಾಯ; ಕೆ.ಗೋಪಾಲಯ್ಯ
Last Updated 26 ಅಕ್ಟೋಬರ್ 2021, 15:49 IST
ಅಕ್ಷರ ಗಾತ್ರ

ಹಾಸನ: ‘ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬಾ ದೇವಿ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶನೀಡಲಾಗುವುದು. ಆದರೆ, ಕೋವಿಡ್‌ ಲಸಿಕೆ ಪಡೆದಿರುವ ಬಗ್ಗೆ ಸರ್ಟಿಫಿಕೇಟ್‌ ಜೆರಾಕ್ಸ್‌ ಮತ್ತು ಆಧಾರ್‌ ಅಥವಾ ಚುನಾವಣಾ ಗುರುತಿನ ಚೀಟಿ ತರುವುದು ಕಡ್ಡಾಯ’ ಎಂದು ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

‘ರಾಜ್ಯದಲ್ಲಿ ಕೊರೊನಾ ಸೋಂಕು ತಗ್ಗಿದೆ. ಪ್ರಾಥಮಿಕ ಶಾಲೆಗಳು ಆರಂಭವಾಗಿವೆ. ರಾಜ್ಯದ ಎಲ್ಲಾದೇವಾಲಯಗಳಲ್ಲಿ ಭಕ್ತರಿಗೆ ಅವಕಾಶ ಇರುವುದರಿಂದ ಅಧಿಕಾರಿಗಳು ಹಾಗೂ ಶಾಸಕರ ಜೊತೆಗೆ ಚರ್ಚಿಸಿಹಾಸನಾಂಬೆ ದರ್ಶನಕ್ಕೆ ಸಾರ್ವಜನಿಕರಿಗೂ ಅವಕಾಶ ಕಲ್ಪಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ’ ಎಂದುಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅ. 28ರ ಮಧ್ಯಾಹ್ನ 12 ಗಂಟೆಗೆ ದೇವಾಲಯದ ಬಾಗಿಲು ತೆರೆಯಲಿದೆ. ನ. 6ರಂದುಬಾಗಿಲು ಮುಚ್ಚಲಾಗುವುದು. ಮೊದಲ ಮತ್ತು ಕೊನೆ ದಿನ ಹೊರತುಪಡಿಸಿ ಉಳಿದ ದಿನಗಳಲ್ಲಿ ಬೆಳಿಗ್ಗೆ 6 ರಿಂದ ಮಧ್ಯಾಹ್ನ 1ಗಂಟೆಯವರೆಗೆ ಮತ್ತು ಮಧ್ಯಾಹ್ನ 3ರಿಂದ ರಾತ್ರಿ 8 ಗಂಟೆವರೆಗೆ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಇದೆ. ನೇರ ದರ್ಶನಕ್ಕೆ ಒಬ್ಬರಿಗೆ ₹ 1000 ಹಾಗೂ ₹ 300 ಟಿಕೆಟ್‌ ನಿಗದಿ ಮಾಡಲಾಗಿದೆ. ಒಂದು ಟಿಕೆಟ್‌ನಲ್ಲಿ ಒಬ್ಬರಿಗೆ ಮಾತ್ರ ಅವಕಾಶ. ಆಹ್ವಾನ ಪತ್ರಿಕೆ ಮತ್ತು ಪಾಸ್‌ನಲ್ಲಿ ಐದು ಜನರಿಗೆ ಅವಕಾಶವಿದೆ’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಈವರೆಗೆ ಶೇ 91ರಷ್ಟು ಜನರಿಗೆ ಲಸಿಕೆ ನೀಡಲಾಗಿದೆ. ಕಳೆದ ಎರಡ್ಮೂರು ತಿಂಗಳಿನಿಂದ ಲಸಿಕೆಗೆ ಅಭಾವ ಇಲ್ಲ. ಜಿಲ್ಲೆಯಲ್ಲಿ 1.75 ಲಕ್ಷ ಡೋಸ್‌ ಕೋವಿಡ್‌ ಲಸಿಕೆ ದಾಸ್ತಾನು ಇದೆ. ಕೋವಿಡ್ ಲಸಿಕೆಯನ್ನು ಈಗಲೂ ಪಡೆಯಬಹುದು. 18 ವರ್ಷದೊಳಗಿನವರಿಗೆ ಲಸಿಕೆ ನೀಡಿಲ್ಲ. ದೇವಾಲಯದ ಎದುರು ಎಲ್‌.ಇ.ಡಿ ಪರದೆ ಅಳವಡಿಸಿ ದರ್ಶನಕ್ಕೆ ಅವಕಾಶ ನೀಡಲಾಗುವುದು. ಹಾಗಾಗಿ ಅವರು ಆರೋಗ್ಯದ ದೃಷ್ಟಿಯಿಂದ ದೇವಾಲಯಕ್ಕೆ ಬರದಿರುವುದು ಒಳ್ಳೆಯದು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT