ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕವಿತೆ ಮೂಲಕ‌ ಜನರ ಎಚ್ಚರಿಸುತ್ತಿದ್ದ ಕವಿ ಬೇಂದ್ರೆ: ವೈ.ಎಸ್.ಸಿದ್ದೇಗೌಡ

Published 4 ಮಾರ್ಚ್ 2024, 14:09 IST
Last Updated 4 ಮಾರ್ಚ್ 2024, 14:09 IST
ಅಕ್ಷರ ಗಾತ್ರ

ಬೇಲೂರು: ವರ ಕವಿ ದ.ರಾ. ಬೇಂದ್ರೆಯವರು ತಾವು ಕಣ್ಣಾರೆ ಕಂಡದ್ದನ್ನು ತಮ್ಮ ಕವಿತೆಗಳಲ್ಲಿ ಬರೆದು ಜನರನ್ನು ಎಚ್ಚರಿಸುತಿದ್ದರು ಎಂದು ಜಾನಪದ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ವೈ.ಎಸ್.ಸಿದ್ದೇಗೌಡ ಹೇಳಿದರು.

ಪಟ್ಟಣ ಸಮೀಪದ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಪರಿಷತ್ತಿನ ತಾಲ್ಲೂಕು ಘಟಕದ ವತಿಯಿಂದ ಸೋಮವಾರ ಆಯೋಜಿಸಿದ್ದ ದ.ರಾ. ಬೇಂದ್ರೆ ಒಂದು ನೆನಪು ಕಾರ್ಯಕ್ರಮದಲ್ಲಿ ಮಾತನಾಡಿದರು. ಜಾನಪದ ಪರಿಷತ್ತು ಕಳೆದ ಐದಾರು ವರ್ಷದಿಂದ ತಾಲ್ಲೂಕಿನಲ್ಲಿ ಕಲೆ, ಸಾಹಿತ್ಯ, ಸಂಗೀತ, ನೃತ್ಯವನ್ನು ಪ್ರೋತ್ಸಾಹಿಸುವುದಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದರು.

ಅಂಗವಿಕಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪುರುಷೋತ್ತಮ್ ಮಾತನಾಡಿ, ಮಹಾನ್ ಕವಿಗಳ ಸಂದೇಶಗಳನ್ನು ಯುವ ಸಮುದಾಯಕ್ಕೆ ತಿಳಿಸುವ ನಿಟ್ಟಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದರು.

ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಎಚ್.ಎಂ.ಮಹೇಶ್, ಸಾಹಿತಿ ಇಂದ್ರಮ್ಮ, ಕವಯತ್ರಿ ಆಶಾಕಿರಣ್, ಪತ್ರಕರ್ತ ಹೆಬ್ಬಾಳು ಹಾಲಪ್ಪ, ವಕೀಲ ಚಂದ್ರು, ಉಪನ್ಯಾಸಕರಾದ ಮೋಹನ್ ಕುಮಾರ್, ವೀರಭದ್ರಪ್ಪ, ಅಧೀಕ್ಷಕ ಕೇಶವಕಿರಣ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT