ಮಂಗಳವಾರ, ಏಪ್ರಿಲ್ 20, 2021
27 °C

ಹಾಸನ: ಕೋವಿಡ್‌ ಲಸಿಕೆ ಪಡೆದಿದ್ದ ಡಿ ದರ್ಜೆ ನೌಕರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಸುರೇಶ್‌

ಹಾಸನ: ಕೋವಿಡ್‌ ಲಸಿಕೆ ಪಡೆದ 20 ದಿನದ ಬಳಿಕ ನಗರದ ಸಿಎಸ್‌ಐ ಮಿಷನ್‌ ಆಸ್ಪತ್ರೆ ಡಿ ದರ್ಜೆ ನೌಕರ ಶುಕ್ರವಾರ ಮೃತಪಟ್ಟಿದ್ದಾರೆ.

ಬೇಲೂರು ತಾಲ್ಲೂಕಿನ ನೆಟ್ಟೆಕೆರೆ ಗ್ರಾಮದ ಸುರೇಶ್‌ (44) ಬೆಳಿಗ್ಗೆ ತಮ್ಮ ಮನೆಯಲ್ಲಿ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಮಿಷನ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸಲಿಲ್ಲ.

‘ಸುರೇಶ್‌ಗೆ ಯಾವುದೇ ಕಾಯಿಲೆ ಇರಲಿಲ್ಲ. ಕೋವಿಡ್‌ ಲಸಿಕೆ ಅಡ್ಡ ಪರಿಣಾಮದಿಂದಲೇ ಮೃತಪಟ್ಟಿರುವ
ಸಾಧ್ಯತೆ ಇದೆ. ಈ ಬಗ್ಗೆ ತನಿಖೆ ನಡೆಸಬೇಕು’ ಎಂದು ಮೃತರ ಸಂಬಂಧಿಕರು ಆಗ್ರಹಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ‘ಈವರೆಗೆ ಕೋವಿಡ್‌ ಲಸಿಕೆ ಪಡೆದವರಿಗೆ ಯಾವುದೇ ತೊಂದರೆ ಆಗಿಲ್ಲ. ಪ್ರಾಥಮಿಕ ವರದಿ ಪ್ರಕಾರ ಹೃದಯ ಸಂಬಂಧಿ ಕಾಯಿಲೆಯಿಂದ ಮೃತಪಟ್ಟಿರಬಹುದು. ಮರಣೋತ್ತರ ಪರೀಕ್ಷೆ ಬಳಿಕ ನಿಖರ ಕಾರಣ ತಿಳಿದು ಬರಲಿದೆ’ ಎಂದು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು