ಶುಕ್ರವಾರ, ಜೂನ್ 25, 2021
22 °C
ಒಂದೇ ದಿನ 2540 ಮಂದಿಗೆ ಕೊರೊನಾ ಪಾಸಿಟಿವ್

ಕೋವಿಡ್‌-19: ಚಿಕಿತ್ಸೆಗೆ ಸ್ಪಂದಿಸದೆ 20 ಮಂದಿ ಸಾವು‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ 2540 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ 20 ಮಂದಿ ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 50,583 ಕ್ಕೆ ಏರಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 13482 ತಲುಪಿದೆ. ಈವರೆಗೆ ಕಾಯಿಲೆಯಿಂದ ಅಸುನೀಗಿದವರ ಸಂಖ್ಯೆ 660. 105 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 36461 ಮಂದಿ ಆರೋಗ್ಯದಲ್ಲಿ ಚೇತರಿಕೆಯಾಗಿದೆ.

ಹೊಸದಾಗಿ ಆಲೂರು ತಾಲ್ಲೂಕಿನ 141, ಅರಕಲಗೂಡು 223, ಅರಸೀಕೆರೆ 316, ಬೇಲೂರು 315, ಚನ್ನರಾಯಪಟ್ಟಣ 484, ಹಾಸನ 670, ಹೊಳೆನರಸೀಪುರ 231, ಸಕಲೇಶಪುರ 144, ಇತರೆ ಜಿಲ್ಲೆಯ 16 ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‌ ಕುಮಾರ್‌ ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು