ಶನಿವಾರ, ಮೇ 15, 2021
26 °C

ಐದು ಕೊರೊನಾ ಸೋಂಕಿತರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಐದು ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 504ಕ್ಕೆ ಏರಿದೆ.

ಮೂರು ದಿನದಲ್ಲಿ 17 ಮಂದಿ ಮೃತಪಟ್ಟಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿಸಿದೆ. ಅದೇ ರೀತಿ ಸೋಂಕಿತರ ಸಂಖ್ಯೆಯೂ ಏರಿಕೆಯಾಗಿದ್ದು, ಒಂದೇ ದಿನ 329 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 32,265ಕ್ಕೆ ಏರಿಕೆಯಾಗಿದ್ದು, 29,859 ಮಂದಿ ಆರೋಗ್ಯದಲ್ಲಿ ಚೇತರಿಕೆಯಾಗಿದೆ. 1902 ಸಕ್ರಿಯ ಪ್ರಕರಣಗಳ ಪೈಕಿ ತೀವ್ರ ನಿಗಾ ಘಟಕದಲ್ಲಿ 23 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸದಾಗಿ ಹಾಸನ 133, ಅರಸೀಕೆರೆ 54, ಚನ್ನರಾಯಪಟ್ಟಣ 51, ಬೇಲೂರು 23, ಹೊಳೆನರಸೀಪುರ 16, ಆಲೂರು 7, ಸಕಲೇಶಪುರ 10, ಅರಕಲಗೂಡು 34 ಹಾಗೂ ಇತರೆ ಜಿಲ್ಲೆಯ ಒಬ್ಬರಿಗೆ ಕೋವಿಡ್ ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ. ಸತೀಶ್ ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು