ಸೋಮವಾರ, ಡಿಸೆಂಬರ್ 5, 2022
24 °C
ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರ‌ ಸಾವು

ಹಾಸನ: ತಮ್ಮನ ಮೃತದೇಹ ನೋಡಿ ಹೃದಯಾಘಾತದಿಂದ ಅಣ್ಣನ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಅರಸೀಕೆರೆ ತಾಲ್ಲೂಕಿನ ಗಂಡಸಿ ಹೋಬಳಿ ಬಾಗೀವಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡಗರಹಳ್ಳಿ ಗ್ರಾಮದಲ್ಲಿ ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರ ಮೃತಪಟ್ಟಿದ್ದಾರೆ. ಈ‌ ಮಧ್ಯೆ ತಮ್ಮನ ಮೃತದೇಹ ನೋಡಿ, ಸಹೋದರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್ (28), ಆಟೋ ಚಾಲಕನಾಗಿದ್ದ ರಾಜ. (30) ಮೃತಪಟ್ಟ ಯುವಕರು.

ಗುರುವಾರ ರಾತ್ರಿ ಗಣಪತಿ ವಿಸರ್ಜನೆ ವೇಳೆ‌ ಕೆರೆಗೆ ಇಳಿದಿದ್ದ ಇಬ್ಬರು, ಈಜು ಬಾರದ್ದರಿಂದ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮೃತಪಟ್ಟ ರಾಜ ಅವರ ಅಣ್ಣ ಮಧು (37) ಬೆಂಗಳೂರಿನಿಂದ ಬಂದಿದ್ದು, ತಮ್ಮನ ಶವ ನೋಡಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ‌.  
ಮೃತದೇಹಗಳನ್ನು ನಗರದ ಹಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮರಣೋತ್ತರ  ಪರೀಕ್ಷೆ ನಡೆಸಲಾಯಿತು. ಸ್ಥಳಕ್ಕೆ ಗಂಡಸಿ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದು, ದೂರು ದಾಖಲಿಸಿದ್ದಾರೆ.

ಓದಿ... ಹಿಂದೂ ದೇವರಿಗೆ ಪ್ರಾರ್ಥಿಸಬೇಡಿ: ಎಎಪಿ ಸಚಿವ ರಾಜೇಂದ್ರ ಪಾಲ್ ವಿವಾದಾತ್ಮಕ ಹೇಳಿಕೆ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು