ಬುಧವಾರ, ಸೆಪ್ಟೆಂಬರ್ 30, 2020
20 °C
156 ಜನರಿಗೆ ಸೋಂಕು ದೃಢ, 68 ಮಂದಿ ಗುಣಮುಖ

ಹಾಸನ: ಕೋವಿಡ್-19ನಿಂದ ಶತಕ ದಾಟಿದ ಸಾವಿನ ಸಂಖ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಹಾಸನ: ಜಿಲ್ಲೆಯಲ್ಲಿ ಭಾನುವಾರ ಏಳು ಕೊರೊನಾ ಸೋಂಕಿತರ ಸಾವಿನೊಂದಿಗೆ ಮೃತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ.

165 ಹೊಸ ಪ್ರಕರಣಗಳೊಂದಿಗೆ ಸೋಂಕಿತರ ಸಂಖ್ಯೆ 3459ಕ್ಕೆ ತಲುಪಿದೆ. ಈ ನಡುವೆ 68 ಮಂದಿ ಗುಣಮುಖರಾಗಿರುವುದು ಸಮಾಧಾನ ಮೂಡಿಸಿದೆ. 41 ಸೋಂಕಿತರು ಗಂಭೀರ ಸಮಸ್ಯೆಯಿಂದಾಗಿ ತುರ್ತು ನಿಗಾ ಘಟಕದಲ್ಲಿದ್ದಾರೆ.

ಶೀತ ಜ್ವರ ಮಾದರಿ ಅನಾರೋಗ್ಯ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅರಕಲಗೂಡು ತಾಲ್ಲೂಕಿನ 45 ವರ್ಷದ ಮಹಿಳೆ, 61 ವರ್ಷದ ವೃದ್ಧ, ಚನ್ನರಾಯಪಟ್ಟಣದ 62 ವರ್ಷ ಹಾಗೂ 70 ವರ್ಷ, ಅರಸೀಕೆರೆ ತಾಲ್ಲೂಕಿನ 55 ವರ್ಷದ, ಹೊಳೆನರಸೀಪುರ ತಾಲ್ಲೂಕಿನ 59 ವರ್ಷ ಹಾಗೂ ಚಿಕ್ಕಮಗಳೂರು ಜಿಲ್ಲೆಯ 49 ವರ್ಷದ ಪುರುಷರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.

ಬೆಂಗಳೂರಿಗೆ ಪ್ರಯಣ ಬೆಳೆಸಿದ ಆಲೂರು ತಾಲ್ಲೂಕಿನ ವ್ಯಕ್ತಿ, ಅರಸೀಕೆರೆ ತಾಲ್ಲೂಕಿನ ಯುವಕ ಹಾಗೂ
25 ವರ್ಷದ ಯುವತಿಗೆ ಸೋಂಕು ದೃಢಪಟ್ಟರೆ, ಉಳಿದ ಪ್ರಕರಣಗಳು ಸೋಂಕಿತ ವ್ಯಕ್ತಿಯ ಪ್ರಾಥಮಿಕ
ಸಂಪರ್ಕದಿಂದ ಕೋವಿಡ್‌ ದೃಢಪಟ್ಟಿದೆ. ಕೆಲ ಪ್ರಕರಣಗಳಲ್ಲಿ ಸೋಂಕು ಮೂಲ ಪತ್ತೆ ಮಾಡಲಾಗುತ್ತಿದೆ.

ಭಾನುವಾರ 68 ಜನ ಸೇರಿದಂತೆಈವರೆಗೆ 1316 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2042 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ ಹಾಗೂ ಹೋಂ ಐಸೋಲೇಷನ್‌ ನಲ್ಲಿ ಇರಿಸಿ ಸಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 41 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ ತಿಳಿಸಿದರು.

ಅರಸೀಕೆರೆ 25, ಚನ್ನರಾಯಪಟ್ಟಣ 7, ಆಲೂರು 4, ಹಾಸನ 85, ಹೊಳೆನರಸೀಪುರ 9, ಅರಕಲಗೂಡು 5, ಬೇಲೂರು 25 , ಸಕಲೇಶಪುರ 5 ಹಾಗೂ ಹೊರ ಜಿಲ್ಲೆಯ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು