ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಕೋವಿಡ್‌ನಿಂದ ಮೃತರ ಸಂಖ್ಯೆ 300ಕ್ಕೆ ಏರಿಕೆ

15 ಸಾವಿರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ
Last Updated 26 ಸೆಪ್ಟೆಂಬರ್ 2020, 15:23 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಕೋವಿಡ್‌ ಪೀಡಿತರ ಸಂಖ್ಯೆ 15 ಸಾವಿರ ದಾಟಿದರೆ, ಸೋಂಕಿನಿಂದ ಮುಕ್ತರಾಗಿ
ಆಸ್ಪತ್ರೆಯಿಂದ ಬಿಡುಗಡೆಗೊಂಡವರ ಸಂಖ್ಯೆ 12 ಸಾವಿರ ದಾಟಿದೆ.

ಮತ್ತೆ ಮೂವರು ಸೋಂಕಿತರ ಸಾವಿನೊಂದಿಗೆ ಮೃತರ ಸಂಖ್ಯೆ 300ಕ್ಕೆ ಏರಿಕೆಯಾಗಿದೆ. ಶನಿವಾರ ಹೊಸದಾಗಿ 229 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 15,144ಕ್ಕೆ ಏರಿಕೆಯಾಗಿದೆ. ಅರಸೀಕೆರೆ ತಾಲ್ಲೂಕಿನ ವ್ಯಕ್ತಿ ಹಾಗೂ ಹಾಸನ ತಾಲ್ಲೂಕಿನ ಇಬ್ಬರು ಕೋವಿಡ್‌ನಿಂದ ಮೃತರಾಗಿದ್ದಾರೆ.

2,489 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಕೇರ್‌ ಸೆಂಟರ್‌ ಹಾಗೂ
ಹೋಂ ಐಸೋಲೆಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಡುಗಡೆಯಾದ 256 ಜನ ಸೇರಿದಂತೆ
ಈವರೆಗೆ 12,355 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 51 ಜನ ಚಿಕಿತ್ಸೆ
ಪಡೆಯುತ್ತಿದ್ದಾರೆ.

ಹೊಸದಾಗಿ ಅರಸೀಕೆರೆ 25, ಚನ್ನರಾಯಪಟ್ಟಣ 62, ಆಲೂರು 12, ಹಾಸನ 9, ಹೊಳೆನರಸೀಪುರ 5, ಅರಕಲಗೂಡು 13, ಬೇಲೂರು 6, ಸಕಲೇಶಪುರ 9 ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT