ಹಾಸನ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಸಿಪಿಎಂ ವತಿಯಿಂದ ಶುಕ್ರವಾರ ನಗರದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.

ಒಂದೂವರೆ ವರ್ಷದಿಂದ ದೇಶದ ಜನತೆ ಕೋವಿಡ್‌ನಿಂದಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ. ಸಮಸ್ಯೆನಿವಾರಣೆಗೆ ಕ್ರಮ ವಹಿಸುವ ಬದಲು ಕೇಂದ್ರ ಸರ್ಕಾರ ಬೆಲೆ ಏರಿಕೆಯ ಹೊರೆ ಹೇರಿದೆ ಎಂದುಪ್ರತಿಭಟನಕಾರರು ಆರೋಪಿಸಿದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಧರ್ಮೇಶ್ ಮಾತನಾಡಿ, ಒಂದು ವರ್ಷದ ಅವಧಿಯಲ್ಲಿ ಪೆಟ್ರೋಲ್‌ಬೆಲೆ ₹25 ಹೆಚ್ಚಳಗೊಂಡಿದೆ. ಒಂದು ತಿಂಗಳಲ್ಲಿ 16 ಬಾರಿ ಬೆಲೆ ಏರಿಸಲಾಗಿದೆ. ಲೀಟರ್‌ಪೆಟ್ರೋಲ್ ದರ ₹ 100 ದಾಟಿದೆ. ಜನ ಸಾಮಾನ್ಯರು ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ಹೇಳಿದರು.

ಇಂಧನ ಬೆಲೆ ಹೆಚ್ಚಳದಿಂದಾಗಿ ಅಗತ್ಯ ವಸ್ತುಗಳ ಬೆಲೆ ಸಹ ಏರಿಕೆ ಆಗಿದೆ. ಜಾಗತಿಕವಾಗಿ ಕಚ್ಛಾತೈಲದಲ್ಲಿ ಯಾವುದೇ ಬೆಲೆ ಏರಿಕೆ ಆಗದಿದ್ದರೂ ದೇಶದಲ್ಲಿ ಈ ಪ್ರಮಾಣದಲ್ಲಿ ದರ ಹೆಚ್ಚಲು ಕೇಂದ್ರಸರ್ಕಾರವೇ ನೇರ ಹೊಣೆ. ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದುಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಿಪಿಎಂ ಸ್ಥಳೀಯ ಸಮಿತಿ ಕಾರ್ಯದರ್ಶಿ ಎಚ್.ಆರ್.ನವೀನ್ ಕುಮಾರ್,ಮುಖಂಡರಾದ ವಸಂತ್ ಕುಮಾರ, ಎಂ.ಜಿ. ಪೃಥ್ವಿ, ಎಂ.ಬಿ.ಪುಷ್ಪ, ಬಾನುಗೊಂದಿ ಲಿಂಗರಾಜುಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.