ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಸಂತ್ರಸ್ತೆ ಕುಟುಂಬಕ್ಕೆ ಪರಿಹಾರ ನೀಡಿ

ಡಿ.ಸಿ ಕಚೇರಿ ಎದುರು ಭೀಮ್‌ ಆರ್ಮಿ ಪ್ರತಿಭಟನೆ
Last Updated 6 ಅಕ್ಟೋಬರ್ 2020, 13:36 IST
ಅಕ್ಷರ ಗಾತ್ರ

ಹಾಸನ: ಉತ್ತರ ಪ್ರದೇಶದ ಹಾಥರಸ್‌ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದುಆಗ್ರಹಿಸಿ ಭೀಮ್ ಆರ್ಮಿ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ
ನಡೆಸಲಾಯಿತು.

ನಾಲ್ವರು ಕಿಡಿಗೇಡಿಗಳು ಅತ್ಯಾಚಾರ ನಡೆಸಿ, ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಕೃತ್ಯ ನಾಗರಿಕ ಸಮಾಜ
ತಲೆ ತಗ್ಗಿಸುವಂತಹದ್ದು. ಯುವತಿ ಕುಟುಂಬದವರಿಗೆ ವಿಷಯ ತಿಳಿಸದೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
ಕರ್ತವ್ಯಲೋಪವೆಸಗಿದ ಪೊಲೀಸರನ್ನು ಅಮಾನತೊಗೊಳಿಸಬೇಕು ಹಾಗೂ ಸರ್ಕಾರ ವಿರುದ್ಧ ಕ್ರಮ
ಕೈಗೊಳ್ಭೇಕು ಎಂದು ಆಗ್ರಹಿಸಿದರು.

ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕು. ಮಹಿಳೆಯರು, ಯುವತಿಯರಿಗೆ ರಕ್ಷಣೆ ಒದಗಿಸಬೇಕು. ಸಂತ್ರಸ್ತೆ ಕುಟುಂಬಕ್ಕೆ ಸೂಕ್ತ ಪರಿಹಾರದ ಜೊತೆಗೆ ನ್ಯಾಯ ಒದಗಿಸಬೇಕು. ಸಿಬಿಐ ತನಿಖೆಯಲ್ಲಿ ವಿಳಂಬ ಮಾಡಬಾರದು ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಭೀಮ್‌ ಆರ್ಮಿ ಜಿಲ್ಲಾಧ್ಯಕ್ಷ ಎಚ್‌.ಎಸ್‌. ಪ್ರದೀಪ್‌, ಪದಾಧಿಕಾರಿಗಳಾದ ರಾಮಚಂದ್ರ, ವಿಜಯ್‌, ರಾಜೇಶ್‌,
ಚಂದ್ರಶೇಖರ, ವಿಠಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT