ಸೋಮವಾರ, ಏಪ್ರಿಲ್ 19, 2021
32 °C
ಡಿ.ಸಿ ಕಚೇರಿ ಎದುರು ಜೆಡಿಎಸ್‌ ಪ್ರತಿಭಟನೆ

ಅಧಿಕಾರಿಗಳ ವಿರುದ್ಧ ತನಿಖೆಗೆ ಒತ್ತಾಯ: ಜೆಡಿಎಸ್‌ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಕರ್ತವ್ಯಲೋಪ ವೆಸಗಿರುವ ಸಹಕಾರ ಸಂಘಗಳ ಸಹಾಯಕ ಅಭಿವೃದ್ಧಿ ಅಧಿಕಾರಿ ವಿ. ಸುನಿಲ್‌ ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕ ನಾರಾಯಣ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ, ಜಿಲ್ಲೆಯಲ್ಲಿ ಅವರು ನಡೆಸಿರುವ ಕಾನೂನು ಬಾಹಿರ ಚಟುವಟಿಕೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಆಗ್ರಹಿಸಿ ಜೆಡಿಎಸ್‌ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಅಧಿಕಾರಿಗಳಾದ ಸುನಿಲ್ ಮತ್ತು ನಾರಾಯಣ್ ಅವರು ಸಹಕಾರ ಸಂಘಗಳ ಕಾನೂನು ಪಾಲನೆ ಮಾಡುತ್ತಿಲ್ಲ. ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಇಬ್ಬರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದರೂ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ ಎಂದು ಪ್ರತಿಭಟನಕಾರರು ಆರೋಪಿಸಿದರು.

ಹಾಸನ ತಾಲ್ಲೂಕಿನ ಶಂಖ ಡೈರಿ ವಿಚಾರವಾಗಿ ಆಡಳಿತಾಧಿಕಾರಿ ಸುನಿಲ್‌ ಅವರು ರಾತ್ರಿ 7 ಗಂಟೆಗೆ ಬಿಜೆಪಿ ಬೆಂಬಲಿತ ರೌಡಿಗಳನ್ನು ಕರೆದುಕೊಂಡು ಹೋಗಿ ಗ್ರಾಮದ ಅಲ್ಪಸಂಖ್ಯಾತ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ನಾರಾಯಣ್ ಸಹ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇಬ್ಬರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

ನಗರಸಭೆ ಸದಸ್ಯ ಗಿರೀಶ್‌ ಚನ್ನವೀರಪ್ಪ, ಎಚ್‌ಡಿಸಿಸಿ ಬ್ಯಾಂಕ್‌ ಸದಸ್ಯ ಬಿದರಕೆರೆ ಜಯರಾಂ, ತಾಲ್ಲೂಕು
ಪಂಚಾಯಿತಿ ಸದಸ್ಯ ನಿಂಗೇಗೌಡ ಹಾಗೂ ಇತರರು ಇದ್ದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು