ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣ್ಣು ತೆಗೆಯುವವರ ವಿರುದ್ಧ ಕ್ರಮಕ್ಕೆ ಆಗ್ರಹ

ಸತ್ಯಮಂಗಲ ಗ್ರಾಮದ ಕೆರೆ ಸ್ವರೂಪ ವಿರೂಪ: ಹಸಿರು ಭೂಮಿ ಪ್ರತಿಷ್ಠಾನ ಆಕ್ರೋಶ
Last Updated 14 ಮೇ 2019, 17:29 IST
ಅಕ್ಷರ ಗಾತ್ರ

ಹಾಸನ: ಸತ್ಯಮಂಗಲ ಗ್ರಾಮದ ಕೆರೆಯ ಮಣ್ಣನ್ನು ಅಕ್ರಮವಾಗಿ ತೆಗೆಯುವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಹಸಿರು ಭೂಮಿ ಪ್ರತಿಷ್ಠಾನದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ನಗರದ ಹೊರವಲಯದಲ್ಲಿರುವ ಸತ್ಯಮಂಗಲ ಕೆರೆಗೆ ಹಸಿರು ಭೂಮಿ ಪ್ರತಿಷ್ಠಾನ ಸಮಿತಿಯ ಸದಸ್ಯರು ಭೇಟಿ ನೀಡಿ ಪರಿಶೀಲಿಸಿದರು.

ಸುಮಾರು 70 ಎಕರೆ ಪ್ರದೇಶದಲ್ಲಿನ ಸತ್ಯಮಂಗಲ ಕೆರೆಯನ್ನು ಕೆಲವರ್ಷಗಳ ಹಿಂದೆ ಸಣ್ಣ ನೀರಾವರಿ ಇಲಾಖೆ ವತಿಯಿಂದ ₹ 4.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕೈಗೊಳ್ಳಲಾಗಿದೆ. ಕೆರೆಯ ಹೂಳು ತೆಗೆಯಲಾಗಿದೆ. ಉದ್ಯಾನ ನಿರ್ಮಾಣ, ಕೆರೆಯ ಸುತ್ತ ಬೇಲಿ ನಿರ್ಮಿಸುವ ಮೂಲಕ ಕೆರೆ ಅಭಿವೃದ್ಧಿಪಡಿಸಲಾಗಿದೆ. ಆದರೆ ಕೆಲವರು ಕೆರೆಯ ಮಣ್ಣನ್ನು ಮನಸೋ ಇಚ್ಛೆ ತೆಗೆದು ಕೆರೆಯನ್ನು ವಿರೂಪಗೊಳಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸತ್ಯಮಂಗಲ ಕೆರೆಯಲ್ಲಿ ಸುಮಾರು ನೂರಕ್ಕೂ ಹೆಚ್ಚು ಕ್ಯುಬಿಕ್ ಮೀಟರ್ ಮಣ್ಣು ತೆಗೆದು ಸಾಗಿಸಲಾಗಿದೆ. ಇದನ್ನು ಯಾರೂ ಸಹ ತಡೆಯುವ ಕೆಲಸ ಮಾಡಿಲ್ಲ. ಬಹುಗ್ರಾಮ ಕುಡಿಯುವ ನೀರು ಯೋಜನೆಯ ಮೂಲಕ ಸತ್ಯಮಂಗಲದ ಕೆರೆಗೆ ನೀರು ತುಂಬಿಸುವ ಯೋಜನೆ ಅನುಷ್ಠಾನಗೊಳಿಸಬೇಕಿದೆ. ಇದಕ್ಕಾಗಿ ಕೆರೆ ಅಭಿವೃದ್ಧಿಪಡಿಸಲಾಗಿದೆ. ಕೆರೆಯ ಹೂಳು ತೆಗೆದು ಸಮತಟ್ಟು ಮಾಡಲಾಗಿತ್ತು. ಆದರೆ, ಕಿಡಿಗೇಡಿಗಳು ಫಲವತ್ತಾದ ಮಣ್ಣು ಸಾಗಿಸಿದ್ದಾರೆ ಎಂದು ಕಿಡಿಕಾರಿದರು.

ಕೆರೆಯಲ್ಲಿ ಮಣ್ಣು ತೆಗೆದಿರುವುರಿಂದ ಮಣ್ಣು ಸಡಿಲಗೊಂಡು ಇದರಿಂದ ಅನಾಹುತವಾಗುವ ಸಾಧ್ಯತೆ ಇರುತ್ತದೆ.
ಸ್ಥಳೀಯರು ಪ್ರಶ್ನೆ ಮಾಡಲು ಮುಂದಾದರೆ ಅಕ್ರಮವಾಗಿ ಮಣ್ಣು ತೆಗೆಯುವ ಕಿಡಿಗೇಡಿಗಳು ಧಮ್ಕಿ ಹಾಕುತ್ತಾರೆ. ರಾತ್ರೋರಾತ್ರಿ ಅಕ್ರಮವಾಗಿ ಕೆರೆಯಲ್ಲಿ ಮಣ್ಣು ತೆಗೆಯುವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT