ಮಂಗಳವಾರ, ಜನವರಿ 25, 2022
25 °C
ಕಾರ್ಮಿಕ ಕಲ್ಯಾಣ ಕಚೇರಿ ಎದುರು ಪ್ರತಿಭಟನೆ

ಕಟ್ಟಡ ಉದ್ಯಮ ರಕ್ಷಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಕಾರ್ಮಿಕ ಮಂಡಳಿ ಘೋಷಿಸಿದ ಎಲ್ಲಾ ಸೌಲಭ್ಯಗಳು ಜಾರಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಕಾರ್ಮಿಕ ಇಲಾಖೆ ಕಚೇರಿ ಎದುರು ಕಾರ್ಮಿಕರು ಗುರುವಾರ ಪ್ರತಿಭಟನೆ ನಡೆಸಲಾಯಿತು.

ಬಾಕಿ ಇರುವ ಸಾವಿರಾರು ಅರ್ಜಿಗಳು ಕೂಡಲೇ ಇತ್ಯರ್ಥಗೊಳಿಸಲು ಈಗಾಗಲೇ ನಡೆದಿರುವ ಸಭೆಗಳ ನಡಾವಳಿಗಳನ್ನು ಜಾರಿಗೊಳಿಸಬೇಕು. ಸರ್ಕಾರ ನಡೆಸಿದ ಸಭೆಗಳಲ್ಲಿ ಹಲವು ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ, ಆದರೆ, ಇದಾದ ಸುಮಾರು 2 ತಿಂಗಳ ಬಳಿಕವೂ ಹಲವು ಸಮಸ್ಯೆಗಳು ಇನ್ನೂ ಪರಿಹಾರ ಕಂಡಿಲ್ಲ ಎಂದು ಆರೋಪಿಸಿದರು.

ಕಟ್ಟಡ ಉದ್ಯಮವನ್ನು ರಕ್ಷಿಸಬೇಕು, ದೇಶದಾದ್ಯಾಂತ ಕಾನೂನು ಬದ್ಧವಾಗಿ ರಚನೆಯಾಗಿರುವ ಕಲ್ಯಾಣ ಮಂಡಳಿ ಉಳಿಯಬೇಕು. ನಿರಂತರವಾಗಿ ಏರಿಕೆ ಯಾಗುತ್ತಿರುವ ಕಟ್ಟಡ ಸಾಮಗ್ರಿಗಳ ಬೆಲೆಗಳ ನಿಯಂತ್ರಣ ಮಾಡಬೇಕು. ಕಟ್ಟಡ ಸಾಮಗ್ರಿಗಳ ಮೇಲೆ ವಿಧಿಸಲಾಗುತ್ತಿರುವ ಜಿಎಸ್‌ಟಿ ಕಡಿತಗೊಳಿಸಬೇಕು. ಲಾಕ್‍ಡೌನ್ ನಗದು ಪರಿಹಾರ ಪಾವತಿ ₹3 ಸಾವಿರ ಎಲ್ಲರಿಗೂ ಸಿಗುವ ವ್ಯವಸ್ಥೆಯಾಗಬೇಕು ಎಂದು ಆಗ್ರಹಿಸಿದರು.

ಪಡಿತರ ಕಿಟ್, ಟೂಲ್‌ಕಿಟ್, ಸುರಕ್ಷಾ ಕಿಟ್ ಖರೀದಿಯಲ್ಲಿ ಪಾರದರ್ಶಕತೆ ಕಾಪಾಡಬೇಕು. ಫಲಾನುಭವಿಗೆ ನೇರ ಹಣ ವರ್ಗಾವಣೆ ಕೈ ಬಿಟ್ಟು ವಿವಿಧ ಸಾಮಗ್ರಿಗಳನ್ನು ಖರೀದಿಸುತ್ತಿರುವುದು  ನಿರಂತವಾಗಿ ನಡೆಯುತ್ತಲೇ ಇದೆ. ಇದು ಅಕ್ರಮ ಹಾಗೂ ಭ್ರಷ್ಟಾಚಾರಕ್ಕೆ ಅವಕಾಶವಾಗಿದೆ.  ಕೂಡಲೇ ಈ ಕ್ರಮಗಳನ್ನು ಕೈ ಬಿಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಮೊರೆ ಹೋಗಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಕಾರ್ಮಿಕ ಸಂಘದ ಕಾರ್ಯದರ್ಶಿ ಅರವಿಂದ್, ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಸಂಘದ ಮೋಹನ್ ಕುಮಾರ್, ಆನಂದ್ ಕೆಲವತ್ತಿ, ಮಹೇಶ್, ಆಂಥೋಣಿ, ಥಾಮಸ್ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು