ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡೆಂಗಿ ಹೆಚ್ಚಳ: ರಸ್ತೆ ಬದಿ ಸ್ವಚ್ಚತೆ

Published 7 ಜುಲೈ 2024, 15:28 IST
Last Updated 7 ಜುಲೈ 2024, 15:28 IST
ಅಕ್ಷರ ಗಾತ್ರ


ಆಲೂರು: ಡೆಂಗಿ ಕಾಯಿಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ಸಂಗ್ರಹವಗುವ  ಮಳೆ ನೀರು ಸರಾಗವಾಗಿ ಚರಂಡಿಗೆ ಹರಿಯುವಂತೆ ಮಾಡುವುದು,ಜನಜಾಗೃತಿ, ವಾರ್ಡುಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಪಟ್ಟಣ ಪಂಚಾಯಿತಿ ಆಡಳಿತ ಮಾಡತೊಡಗಿದೆ.

ಆಸ್ಪತ್ರೆ ಸಿಬ್ಬಂದಿ  ಮತ್ತು ಆಶಾ ಕಾರ್ಯಕರ್ತೆಯರು  ಮನೆಗಳ ಬಳಿ ತೆರಳಿ ಸುತ್ತ  ನೀರು ನಿಲ್ಲದಂತೆ ಜಾಗ್ರತೆ ವಹಿಸುವಂತೆ ಮತ್ತು ಜ್ವರ ಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸುವಂತೆ ಸೂಚನೆ ನೀಡುತ್ತಿದ್ದಾರೆ. ಪಟ್ಟಣ ಪಂಚಾಯಿತಿ  ರಸ್ತೆ ಬದಿಗಳಲ್ಲಿ ನಿಂತಿರುವ ನೀರನ್ನು ಸರಾಗವಾಗಿ ಚರಂಡಿಗೆ ಹರಿಯುವಂತೆ ಕೆಲಸ ಮಾಡುತ್ತಿದ್ದಾರೆ.

ಮನೆಗಳಲ್ಲಿ ಸಂಗ್ರಹವಾಗುವ ಕಸವನ್ನು ಅಲ್ಲಲ್ಲಿ ಎಸೆಯಬಾರದು. ಕಸ ಕೊಳೆತು ಸೊಳ್ಳೆಗಳ ಉತ್ಪತ್ತಿ ತಾಣವಾಗಲಿದೆ. ಕಸದ ವಾಹನಕ್ಕೆ ಕಸವನ್ನು ನೀಡಬೇಕು.  ರಸ್ತೆಬದಿ  ಕಸ ಹಾಕಿದರೆ ದಂಡ ವಿಧಿಸಲಾಗುವುದು ಎಂದು ನಾಮಫಲಕ ಹಾಕಲಾಗಿದೆ. ಆದರೂ ಕೆಲವರು ಕಸ ತಂದು ಬಿಸಾಡುತ್ತಿದ್ದಾರೆ. ಸಾರ್ವಜನಿಕರು ಕಸ ಬಿಸಾಡುವವರನ್ನು ಗುರುತಿಸಿ ಪಂಚಾಯಿತಿ ಕಚೇರಿಗೆ ತಿಳಿಸಿದರೆ, ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುವುದು. ವಿವರ ನೀಡುವವರ ನಂಬರು ಹೆಸರನ್ನು ಬಹಿರಂಗಪಡಿಸುವುದಿಲ್ಲ ಎಂದು ಪಟ್ಟಣ ಪಂಚಾಯಿತಿ ಮುಖ್ಯಾದಿಕಾರಿ ಸ್ಟೀಫನ್ ಪ್ರಕಾಶ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT