ಹಾಸನ: ಎಚ್.ಡಿ.ದೇವೇಗೌಡ ಮತ್ತು ನಿರ್ಮಲಾನಂದನಾಥ ಸ್ವಾಮೀಜಿ ಮಧ್ಯ ಪ್ರವೇಶಿಸಿ ಸಂಸದೆ ಸುಮಲತಾ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ಮಾತಿನ ಸಮರಕ್ಕೆ ಕಡಿವಾಣ ಹಾಕಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಎ.ಮಂಜುಸಲಹೆ ನೀಡಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಎಚ್.ಡಿ. ರೇವಣ್ಣ ಮಾತನಾಡಿ ನಿಖಿಲ್ ಕುಮಾರಸ್ವಾಮಿ ಸೋಲಿಗೆ ಕಾರಣರಾದರು. ಈಗ ಎಚ್.ಡಿ.ಕುಮಾರಸ್ವಾಮಿ ಮಾತನಾಡಿಮಗನ ಭವಿಷ್ಯ ಹಾಳು ಮಾಡಿಕೊಳ್ಳುತ್ರಿದ್ದಾರೆ. ಹಾಗಾಗಿ ಇಬ್ಬರು ನಾಯಕರ ಜತೆ ಗೌಡರು ಮತ್ತು ಸ್ವಾಮೀಜಿ ಮಾತನಾಡಿದರೆ ತಪ್ಪಿಲ್ಲ. ಕೆಲವರು ತಮ್ಮ ಅನುಕೂಲಕ್ಕಾಗಿ ಇಬ್ಬರು ನಾಯಕರ ಪರವಾಗಿ ಮಾತನಾಡುತ್ತಾರೆ ಎಂದು ತಿಳಿಸಿದರು.
‘ಬಿಜೆಪಿಯಲ್ಲಿ ನನ್ನನ್ನು ಗೌರವಯುತವಾಗಿ ನಡೆಸಿಕೊಂಡಿದ್ದಾರೆ. ಹಾಗಾಗಿ ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.