ದಾಖಲೆ ಇಲ್ಲದ ₹ 25 ಲಕ್ಷ ನಗದು ವಶ

ಮಂಗಳವಾರ, ಏಪ್ರಿಲ್ 23, 2019
31 °C
ನಗದು, ಕಾರು ವಶ: ವಿಚಾರಣೆ ಆರಂಭ

ದಾಖಲೆ ಇಲ್ಲದ ₹ 25 ಲಕ್ಷ ನಗದು ವಶ

Published:
Updated:

ಹೊಳೆನರಸೀಪುರ: ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ₹ 25 ಲಕ್ಷ ನಗದನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಹಾಸನ–ಮೈಸೂರು ರಸ್ತೆಯ ಹಳ್ಳಿ ಮೈಸೂರು ಕ್ರಾಸ್‌ ಬಳಿ ಕಾರು ತಪಾಸಣೆ ಮಾಡಿದಾಗ ₹ 25 ಲಕ್ಷ ನಗದು ಪತ್ತೆಯಾಗಿದ್ದು, ಹಣದೊಂದಿಗೆ ಚಾಲಕನನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ಹೊಳೆನರಸೀಪುರ ಗ್ರಾಮಾಂತರ ಪೊಲೀಸ್‌ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

ದಳಪತಿಗಳು ಹಾಗೂ ಅವರ ಬೆಂಬಲಿಗರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

 

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !