ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಗಾರಿಗಳಿಗೆ ಬಿಡುಗಡೆಯಾಗದ ಅನುದಾನ, 15ಕ್ಕೆ ವಿಧಾನಸಭೆಯಲ್ಲಿ ಧರಣಿ: ರೇವಣ್ಣ

Last Updated 12 ಮಾರ್ಚ್ 2021, 12:07 IST
ಅಕ್ಷರ ಗಾತ್ರ

ಹಾಸನ: ಕಾಂಗ್ರೆಸ್‌ ಹಾಗೂ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮಂಜೂರಾಗಿರುವ ಯೋಜನೆಗಳಿಗೆ ಅನುದಾನ ನೀಡುವಂತೆ ಒತ್ತಾಯಿಸಿ ವಿಧಾನಸಭೆಯಲ್ಲಿ ಸೋಮವಾರಧರಣಿ ನಡೆಸಲಾಗುವುದು ಎಂದು ಶಾಸಕ ಎಚ್‌.ಡಿ.ರೇವಣ್ಣ ಹೇಳಿದರು.

ಹೊಸ ಯೋಜನೆಗಳಿಗೆ ಹಣ ನೀಡುವಂತೆ ಕೇಳುತ್ತಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ಆಡಳಿತಾತ್ಮಕ ಮಂಜೂರಾತಿ ದೊರೆತಿರುವ ಕಾಮಗಾರಿಗೆ ಅನುದಾನ ನೀಡುವಂತೆಸಿ.ಎಂ ಗೆ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಕೇವಲ ಬಿಜೆಪಿಶಾಸಕರ ಕ್ಷೇತ್ರಗಳಿಗೆ ಮಾತ್ರ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಶಾಸಕಾಂಗಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಜತೆ ಶಾಸಕರು ಚರ್ಚೆ ನಡೆಸಿದ್ದು, ವಿಧಾನಸಭಾಧ್ಯಕ್ಷರಿಗೂ ಈ ವಿಷಯ ತಿಳಿಸಲಾಗಿದೆ. ಪಕ್ಷದ ಎಲ್ಲ ಶಾಸಕರು ಧರಣಿಯಲ್ಲಿ ಭಾಗವಹಿಸುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶಾಸಕರಿಗೆ ಅನ್ಯಾಯವಾದಾಗ ರಕ್ಷಣೆ ಧಾವಿಸುವುದು ಸ್ಪೀಕರ್ ಕರ್ತವ್ಯ. ಅವರು ಒಂದುಪಕ್ಷದ ಪರವಾಗಿ ಕಾರ್ಯನಿರ್ವಹಿಸಬಾರದು. ಬಿಜೆಪಿ ಸರ್ಕಾರದಲ್ಲಿ ಯಾವ ಜಿಲ್ಲೆಗೆ ಎಷ್ಟು ಅನುದಾನ ಬಿಡುಗಡೆ ನೀಡಲಾಗಿದೆ ಎಂಬುದರ ಬಗ್ಗೆ ಶ್ವೇತ ಪತ್ರ ಹೊರಡಿಸಲಿ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT