ಚನ್ನರಾಯಪಟ್ಟಣ: ‘ಅಧಿಕಾರ ಇರಲಿ, ಇಲ್ಲದಿರಲಿ ಜನಸೇವೆ ಮಾಡುವುದು ಮುಖ್ಯ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಪಟ್ಟಣದ ಗಣಪತಿ ಪೆಂಡಾಲ್ನಲ್ಲಿ ಕಾಂಗ್ರೆಸ್ ಮುಖಂಡ ಎಂ.ಎ.ಗೋಪಾಲಸ್ವಾಮಿ ಜನ್ಮದಿನದ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.

‘ರಾಜಕೀಯ ಅಧಿಕಾರ ಪಡೆದುಕೊಂಡು ಒಳ್ಳೆಯ ಕೆಲಸ ಮಾಡುವ ಇಚ್ಛೆ ಇರಬೇಕು. ಬದ್ಧತೆ ಇರುವ ರಾಜಕಾರಣಿಗಳಿಂದ ನಾಡಿಗೆ ಮತ್ತು ಕ್ಷೇತ್ರದ ಜನರಿಗೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಗೋಪಾಲಸ್ವಾಮಿ ಜನರಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗೋಪಾಲಸ್ವಾಮಿ ಜನ್ಮದಿನಾಚರಣೆ ಅಂಗವಾಗಿ ಕಬಡ್ಡಿ ಟೂರ್ನಿ ಆಯೋಜಿಸುವ ಮೂಲಕ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿವರ್ಷ ಟೂರ್ನಿ ಆಯೋಜಿಸಲಾಗುತ್ತಿರುವುದು ಶ್ಲಾಘನೀಯ. ಇದರಿಂದ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಲು ಅವಕಾಶವಾಗುತ್ತದೆ ಎಂದರು.

ಆದಿಚುಂಚನಗಿರಿ ಶಾಖಾ ಮಠಾಧೀಶ ಶಂಭುನಾಥ ಸ್ವಾಮೀಜಿ ಮಾತನಾಡಿ, ಗಣಪತಿ ಪೆಂಡಾಲ್ನಲ್ಲಿ ಪ್ರತಿವರ್ಷ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮದ ಜತೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು 48 ದಿನ ದಾಸೋಹ ಏರ್ಪಡಿಸಲಾಗುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಎಂ.ಎ.ಗೋಪಾಲಸ್ವಾಮಿ ಮಾತನಾಡಿ, ‘ಈ ಹಿಂದೆ ನಾನು ವಿಧಾನಪರಿಷತ್ತು ಸದಸ್ಯನಾಗಿದ್ದಾಗ ಸಂಸದೀಯ ಕಾರ್ಯದರ್ಶಿಯಾಗಿ ಆಯ್ಕೆಯಾಗುವಾಗ ಜಿಲ್ಲೆಯ ಕೆಲ ನಾಯಕರು 2 ತಿಂಗಳು ತಡೆದಿದ್ದರು. ಆದರೆ ಅಂತಹ ಸಂದರ್ಭದಲ್ಲಿ ನನ್ನ ರಾಜಕೀಯ ಏಳಿಗೆಗೆ ಕೆಪಿಸಿಸಿ ಅಧ್ಯಕ್ಷರಾಗಿದ್ದ ದಿನೇಶ್ ಗುಂಡೂರಾವ್ ಕಾರಣಕರ್ತರಾದರು’ ಎಂದು ತಿಳಿಸಿದರು.

ಅದಿಚುಂಚನಗಿರಿ ಆಸ್ಪತ್ರೆ ವತಿಯಿಂದ ಆರೋಗ್ಯ ತಪಾಸಣೆ ನಡೆಸಲಾಯಿತು. ಗಣಪತಿ ಪೆಂಡಾಲ್ ವತಿಯಿಂದ ಸಚಿವ ಗುಂಡೂರಾವ್ ಮತ್ತು ಗೋಪಾಲಸ್ವಾಮಿ ಪೂಜೆ ಸಲ್ಲಿಸಿದರು. ಅವರನ್ನು ಸನ್ಮಾನಿಸಲಾಯಿತು.

ಲೋಕಸಭಾ ಸದಸ್ಯ ಶ್ರೇಯಸ್ ಎಂ.ಪಟೇಲ್ ಮಾತನಾಡಿದರು. ಹೊಸಕೊಪ್ಪಲು ಚೌಡೇಶ್ವರಿ ದೇವಿ ಶಕ್ತಿ ಪೀಠಾಧ್ಯಕ್ಷ ಬಸವೇಶ್ವರ ಚೈತನ್ಯ ಸ್ವಾಮೀಜಿ, ಪರಿಸರವಾದಿ ಸಿ.ಎನ್.ಅಶೋಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ಮಂಜೇಗೌಡ, ಆದಿಚುಂಚನಗಿರಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಾರ್ವಜನಿಕ ಸಂಪರ್ಕಾಧಿಕಾರಿ ಧಮೇಂದ್ರ, ಪೀಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಿ.ಎನ್.ಮಂಜುನಾಥ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಿ.ಆರ್.ಮೂರ್ತಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಲ್.ಪಿ.ಪ್ರಕಾಶ್ ಗೌಡ, ಮುಖಂಡರಾದ ಎಚ್.ಕೆ.ಮಹೇಶ್, ಎ.ಸಿ.ಆನಂದಕುಮಾರ್, ಎಂ.ಎ.ರಂಗಸ್ವಾಮಿ, ಗಣಪತಿ ಪೆಂಡಾಲ್ ಪದಾಧಿಕಾರಿಗಳಾದ ಸಿ.ಕೆ.ಕೃಷ್ಣ, ಮಹದೇವ್ ಸಿ.ವೈ.ಸತ್ಯನಾರಾಯಣ್ ಇದ್ದರು.

ಜನರಿಗೆ ಸ್ಪಂದಿಸುವ ಕೆಲಸ ಕ್ರೀಡಾಪಟುಗೆ ಪ್ರೋತ್ಸಾಹಿಸಲು ಕ್ರೀಡಾಕೋಟ ಆಯೋಜನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.