ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ ವಸೂಲಾತಿ ಹೆಚ್ಚಿಸಲು ಸೂಚನೆ

ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಜಿ.ಪಂ ಸಿಇಒ ಕಾಂತರಾಜ್
Last Updated 23 ಮೇ 2022, 4:30 IST
ಅಕ್ಷರ ಗಾತ್ರ

ಹಾಸನ: ‘ತಾಲ್ಲೂಕು ಮಟ್ಟದ ನರೇಗಾ ಹಾಗೂ ವಿವಿಧ ಇಲಾಖೆಗಳ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದ್ದು, ಕೂಡಲೇ ಕಾರ್ಯಪ್ರವೃತ್ತರಾಗಿ ಗುರಿ ಸಾಧಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕಾಂತರಾಜ್ ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣ ದಲ್ಲಿ ನಡೆದ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ‘ನರೇಗಾ ಹಾಗೂ ವಿವಿಧ ಇಲಾಖೆಗಳಲ್ಲಿ ಇರುವ ಯೋಜನೆಗಳ ಬಗ್ಗೆ ವ್ಯಾಪಕ ಪ್ರಚಾರ ಮಾಡಿ ಜನರು ಅದನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.

‘ಗ್ರಾಮ ಪಂಚಾಯಿತಿಗಳು ಸಕಾಲದಲ್ಲಿ ಗ್ರಾಮ ಸಭೆಗಳನ್ನು ನಡೆಸಬೇಕು ಹಾಗೂ ಕರ ವಸೂಲಾತಿ ಯನ್ನು ಹೆಚ್ಚಿಸಬೇಕು. ನರೇಗಾ ಯೋಜನೆಯನ್ನು ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ ಹಾಗೂ ಗ್ರಾಮ ಪಂಚಾಯಿತಿಗಳು ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಿಂದ ಉತ್ತಮವಾಗಿ ಪ್ರಗತಿ ಸಾಧಿಸಬೇಕು. ಭಾರಿ ಮಳೆಯಿಂದ ಮನೆಗಳು ಹಾನಿಯಾಗಿದ್ದರೆ ಆ ಬಗ್ಗೆ ಜಿಲ್ಲಾ ಪಂಚಾಯಿತಿಗೆ ಮಾಹಿತಿ ನೀಡಬೇಕು’ ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿಅಭಿವೃದ್ಧಿ ವಿಭಾಗದ ಉಪ ಕಾರ್ಯದರ್ಶಿ ಪುನೀತ್ ಮಾತನಾಡಿ, ‘ಈಗಾಗಲೇ ಯೋಜನಾ ಪಟ್ಟಿಗೆ ಅನುಮೋದನೆ ನೀಡಿರುವ ಕೆಲಸಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಅರಣ್ಯ ಇಲಾಖೆಯಿಂದ ಜನರಿಗೆ ನೀಡುವ ವಿವಿಧ ಸಸಿಗಳ ಬಗ್ಗೆ ಗ್ರಾಮೀಣ ಭಾಗಗಳಲ್ಲಿಧ್ವನಿವರ್ಧಕಗಳ ಮೂಲಕ ಪ್ರಚಾರ ಮಾಡಬೇಕು. ಸರ್ಕಾರಿ ಶಾಲಾ ಆಟದ ಮೈದಾನಕ್ಕೆ ಹೆಚ್ಚಿನ ಒತ್ತು ನೀಡಿ ಸುಸಜ್ಜಿತ ಆಟದ ಮೈದಾನ ನಿರ್ಮಿಸಬೇಕು’ ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ವಿಠ್ಠಲ್ ಕಾವಳೆ ಮಾತನಾಡಿ, ‘ನರ್ಸರಿ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ಸ್ವಸಹಾಯ ಸಂಘಗಳಿಗೆ ಕಾರ್ಯಾಗಾರವನ್ನು ಆಯೋಜಿಸಿ ಅವರಲ್ಲಿ ವಿವಿಧ ಸಸಿಗಳನ್ನು ಬೆಳೆಸುವಂತೆ ಪ್ರೋತ್ಸಾಹಿಸಬೇಕು’ ಎಂದು ಸಲಹೆ ನೀಡಿದರು.

‘ಮಹಿಳೆಯರಲ್ಲಿ ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಉಚಿತವಾಗಿ ತರಬೇತಿ ನೀಡಲಾಗುವುದು. ಅದರ ಸದುಪಯೋಗ ಪಡಿಸಿಕೊಳ್ಳುವಂತೆ ಮಹಿಳಾ ಸ್ವ ಸಹಾಯ ಸಂಘಗಳಲ್ಲಿ ಅರಿವು ಮೂಡಿಸಬೇಕು’ ಎಂದು ತಿಳಿಸಿದರು.

ಮುಖ್ಯ ಯೋಜನಾಧಿಕಾರಿ ನಾಗರಾಜ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎಲ್ ಯಶವಂತ್, ಸಹಾಯಕ ನಿರ್ದೇಶಕರಾದ ದಿನೇಶ್, ನಟರಾಜ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ರವಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅಜಯ್ ಕುಮಾರ್ ಇದ್ದರು.

ಕಸದ ಬುಟ್ಟಿ ವಿತರಣೆಗೆ ಸೂಚನೆ

ಜಿಲ್ಲಾ ಪಂಚಾಯಿತಿ ಆಡಳಿತ ವಿಭಾಗದ ಉಪ ಕಾರ್ಯದರ್ಶಿ ಚಂದ್ರಶೇಖರ್ ಮಾತನಾಡಿ, ‘ಸ್ವಚ್ಛ ಭಾರತ್ ಮಿಷನ್‌ನಡಿ ಕಸದ ಬುಟ್ಟಿಗಳನ್ನು ವಿತರಿಸಿ, ಒಣ ಮತ್ತು ಹಸಿಕಸ ವಿಂಗಡಿಸಿ ಕಸ ಸಂಗ್ರಹಣೆ ಮಾಡುವ ವಾಹನ ಗಳಿಗೆ ನೀಡುವ ಮೂಲಕ ಪರಿಸರ ಕಾಪಾಡಬೇಕು’ ಎಂದು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT