ಮಂಗಳವಾರ, ಜೂನ್ 15, 2021
22 °C
ಶ್ರಮ ಕಚೇರಿ ಎದುರು ಸಿಪಿಎಂ ಕಾರ್ಯಕರ್ತರ ಪ್ರತಿಭಟನೆ

ಉಚಿತ ಲಸಿಕೆ, ಔಷಧಿ ವಿತರಣೆಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಉಚಿತ ಲಸಿಕೆ, ಔಷಧಿ ವಿತರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಪಿಎಂ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. 

ನಗರದ ಶ್ರಮ ಕಚೇರಿ ಎದುರು ಕಾರ್ಯಕರ್ತರು, ‘ಕೋವಿಡ್ ಎರಡನೇ ಅಲೆ ಜೀವ ಉಳಿಸಿ- ಜೀವನ ರಕ್ಷಿಸಿ’ ಎಂಬ ಘೋಷಣೆ ಕೂಗಿದರು.

ಕೋವಿಡ್‌ ಎರಡನೇ ಅಲೆ ನಿಯಂತ್ರಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿಫಲವಾಗಿದೆ. ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸರ್ಕಾರ ತಡ ಮಾಡದೇ ಈಗಿನಿಂದಲೇ  ಮೂರನೇ ಅಲೆಗೆ ಸನ್ನದ್ದವಾಗಬೇಕು. ಸಾರ್ವತ್ರಿಕ ಉಚಿತ ಲಸಿಕೆ, ಔಷಧಿ ನೀಡಬೇಕು ಎಂದು ಆಗ್ರಹಿಸಿದರು.

ರೈತರು ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಬೇಕು. ಉದ್ಯೋಗ ಖಾತ್ರಿಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಬೇಕು. ಕೋವಿಡ್ ಮುಂಚೂಣಿ ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ
ಒದಗಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಧರ್ಮೇಶ್, ಸ್ಥಳೀಯ ಸಮಿತಿ ಕಾರ್ಯದರ್ಶಿ ಎಚ್.ಆರ್. ನವೀನ್ ಕುಮಾರ್, ಸದಸ್ಯರಾದ ಜಿ.ಪಿ. ಸತ್ಯನಾರಾಯಣ, ಎಂ.ಜಿ. ಪೃಥ್ವಿ, ಪುಷ್ಪ, ಅರವಿಂದ್ ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.