ಶುಕ್ರವಾರ, ನವೆಂಬರ್ 22, 2019
19 °C

ಡಿಕೆಶಿ 5 ವರ್ಷ ಸಿಎಂ: ಹಾಸನಾಂಬೆ ದರ್ಶನ ಬಳಿಕ ಬ್ರಹ್ಮಾಂಡ ಗುರೂಜಿ ಭವಿಷ್ಯ

Published:
Updated:

ಹಾಸನ: ಹಾಸನಾಂಬೆಯ ದರ್ಶನ ಪಡೆದ ಬ್ರಹ್ಮಾಂಡ ಗುರೂಜಿ ಜ್ಯೋತಿಷಿ ನರೇಂದ್ರ ಬಾಬು ಶರ್ಮ, ದೇಶದ ಪ್ರಧಾನಿ ಹಾಗೂ ರಾಜ್ಯಕ್ಕೆ ಸಂಬಂಧಪಟ್ಟಂತೆ ಭವಿಷ್ಯ ನುಡಿದಿದ್ದಾರೆ.

‘ಬರುವ ನ. 4ರಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಗಂಡಾಂತರ ಇದೆ. ಅವರು ಈ ಅವಧಿಯಲ್ಲಿ ಅಪಮೃತ್ಯು ಗಂಡಾಂತರದಿಂದ ಪಾರಾದರೆ ಇನ್ನೂ ಎರಡೂ ಮುಕ್ಕಾಲು ವರ್ಷ ಪ್ರಧಾನಿಯಾಗಿ ಇರುತ್ತಾರೆ’ ಎಂದು ಹಾಸನಾಂಬೆ ಮೇಲೆ ಆಣೆ ಮಾಡಿ ಭವಿಷ್ಯ ನುಡಿದರು.

‘ರಾಜ್ಯ ರಾಜಕಾರಣ ಬಗ್ಗೆಯೂ ಭವಿಷ್ಯ ನುಡಿದ ಅವರು, ರಾಜ್ಯದಲ್ಲಿ ಈ ಹಿಂದೆ ಇದ್ದವರು ಯಾರೂ ಮುಖ್ಯಮಂತ್ರಿ ಆಗೋದಿಲ್ಲ. ಹೊಸ ಸರ್ಕಾರ ಬಂದರೆ ಹೊಸಬರೇ ಮುಖ್ಯಮಂತ್ರಿಯಾಗುತ್ತಾರೆ. ಯಡಿಯೂರಪ್ಪಗೆ ಪೂರ್ಣ ಅವಧಿಗೆ ಸಿಎಂ ಆಗಿರುವ ಅವಕಾಶ ಇಲ್ಲವೇ ಇಲ್ಲ. ಸಮ್ಮಿಶ್ರ ಸರ್ಕಾರ ಇನ್ನು ಅಧಿಕಾರಕ್ಕೆ ಬರುವುದಿಲ್ಲ’ ಎಂದರು.

ಡಿ.ಕೆ.ಶಿವಕುಮಾರ್ ವಿಚಾರ ಪ್ರಸ್ತಾಪ ಮಾಡಿದ ಅವರು, ‘ಕೋಟಿ ಕೋಟಿ ಹಣ ಮಾಡಿದವರು ಕೃಷ್ಣ ಜನ್ಮಸ್ಥಳಕ್ಕೆ ಹೋಗಲೇಬೇಕು. ಮುಂದಿನ 10 ವರ್ಷದಲ್ಲಿ ಡಿ.ಕೆ.ಶಿವಕುಮಾರ್ ಒಂದು ಬಾರಿ ಮುಖ್ಯಮಂತ್ರಿ ಆಗುವುದು ನಿಶ್ಚಿತ. 10 ವರ್ಷಗಳಲ್ಲಿ ಐದು ವರ್ಷ ಸಿ.ಎಂ ಆಗುತ್ತಾರೆ’ ಎಂದು ಭವಿಷ್ಯ ನುಡಿದರು.

‘ಹಾಸನಾಂಬೆ ನೆಲೆ ತುಂಬಾ ವೈಶಿಷ್ಟ್ಯವಾದ ಕ್ಷೇತ್ರ. ಹಾಸನಾಂಬೆ ಆಜ್ಞೆ ಇದ್ದರೆ ಮಾತ್ರ ನಾನು ಮಾತನಾಡುತ್ತೇನೆ. ಪ್ರಾಕೃತಿಕ ವಿಕೋಪಗಳು ಹೆಚ್ಚುತ್ತವೆ. ಆಹಾರದ ಬೆಲೆ ಏರುತ್ತದೆ, ಜನರು ಎಚ್ಚರಿಕೆಯಿಂದ ಇರಬೇಕು’ ಎಂದು ಬ್ರಹ್ಮಾಂಡ ಗುರೂಜಿ ಹೇಳಿದರು.

ಪ್ರತಿಕ್ರಿಯಿಸಿ (+)