ಹಾಸನ: ಗೊರೂರು ಸಮೀಪದ ಹೇಮಾವತಿ ಹಿನ್ನೀರಿಗೆ ಇಳಿದಿದ್ದ ಹೊಳೆನರಸೀಪುರ ತಾಲ್ಲೂಕಿನ ಕೆರಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಚಂದ್ರಶೇಖರ್ (31), ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಅರಕಲಗೂಡು ಪಟ್ಟಣದ ಹೌಸಿಂಗ್ ಬೋರ್ಡ್‌ನಲ್ಲಿ ವಾಸವಿದ್ದ ಚಂದ್ರಶೇಖರ್, ಸೆ. 14 ರಂದು ಹೇಮಾವತಿ ಹಿನ್ನೀರಿನಲ್ಲಿರುವ ದೇವಾಲಯಕ್ಕೆ ತೆರಳಿದ್ದರು. ಕೋನಾಪುರ ದ್ವೀಪದ ರಂಗನಾಥಸ್ವಾಮಿ ದೇವಾಲಯಕ್ಕೆ ಹೋಗಿ ಬರುವುದಾಗಿ ಆಪ್ತರಿಗೆ ತಿಳಿಸಿ ಹೋಗಿದ್ದರು.

ಬೆಳಿಗ್ಗೆ ದೇವಸ್ಥಾನಕ್ಕೆ ತೆರಳಿದ್ದ ಚಂದ್ರಶೇಖರ್ ಸಂಜೆ 5 ಗಂಟೆಯಾದರೂ ಬಾರದೇ ಇದ್ದಾಗ, ಗೊರೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಕಾರು ಹಾಗೂ ಬಟ್ಟೆ ಪತ್ತೆಯಾಗಿವೆ. ಸೆ. 15 ರಂದು ಶವ ನೀರಿನಲ್ಲಿ ತೇಲಿ ಬಂದಿದ್ದು, ಅರಕಲಗೂಡು ತಾಲ್ಲೂಕು ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ಘಟನೆ ಸಂಬಂಧ ಗೊರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.