ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶಸ್ತಿ, ಅಧಿಕಾರದ ಬೆನ್ನತ್ತಬೇಡಿ: ಮಂಜಮ್ಮ ಜೋಗತಿ

ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಅಭಿಮತ
Last Updated 14 ಫೆಬ್ರುವರಿ 2022, 5:41 IST
ಅಕ್ಷರ ಗಾತ್ರ

ಚನ್ನರಾಯಪಟ್ಟಣ: ‘ಪ್ರಶಸ್ತಿ, ಅಧಿಕಾರದ ಬೆನ್ನತ್ತಿ ಹೋಗಬಾರದು’ ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಹೇಳಿದರು.

ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ ಶನಿವಾರ ಪಟ್ಟಣದ ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಏರ್ಪಡಿಸಿದ್ದ ಜಾನಪದ ಸಂಭ್ರಮ ಉದ್ಘಾಟಿಸಿದ ಅವರು, ‘ಕಲಾ ಕ್ಷೇತ್ರದಲ್ಲಿ ಶ್ರದ್ಧೆ, ಸಮರ್ಪಣಾ ಮನೋಭಾವದಿಂದ ಕೆಲಸ ಮಾಡಿದರೆ ಪ್ರಶಸ್ತಿ ದೊರಕುತ್ತದೆ ಜೊತೆಗೆ ಯಶಸು ಲಭಿಸುತ್ತದೆ. ನಾವು ಮಾಡುವ ಕೆಲಸದಲ್ಲಿ ಪರಮಾತ್ಮನನ್ನು ಕಾಣಬೇಕು’ ಎಂದರು.

‘ಸುಗ್ಗಿ ಸಂಭ್ರಮ, ಸುಗ್ಗಿ- ಹಿಗ್ಗಿ, ಶ್ರಾವಣ ಸಂಭ್ರಮ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಕೊರೊನಾದಿಂದ ಅನೇಕ ಕಾರ್ಯಕ್ರಮ ರೂಪಿಸಲಾಗಲಿಲ್ಲ. ಆನ್‍ಲೈನ್ ಮೂಲಕ ಕಾರ್ಯಕ್ರಮ ಆಯೋಜಿಸಬೇಕಾಯಿತು. ಜಾನಪದ ತರಬೇತಿ ಶಿಬಿರ ಏರ್ಪಡಿಸಲಾಗುತ್ತಿದೆ. ಜೋಗತಿ ನೃತ್ಯವನ್ನು ಕಲಿಸಿ ಕೊಡಲಾಗುತ್ತಿದೆ’ ಎಂದು ಹೇಳಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಚ್.ಎನ್. ಲೋಕೇಶ್ ಮಾತನಾಡಿ, ‘ಜಾನಪದ ಕಲೆಯನ್ನು ಮಕ್ಕಳಿಗೆ ಕಲಿಸಬೇಕು. ಮುಂದಿನ ದಿನಗಳಲ್ಲಿ ಜಾನಪದ ಅಕಾಡೆಮಿ ಜೊತೆ ಕನ್ನಡ ಸಾಹಿತ್ಯ ಪರಿಷತ್ತು ಅನೇಕ ಕಾರ್ಯಕ್ರಮ ರೂಪಿಸುವ ಉದ್ದೇಶವಿದೆ’ ಎಂದರು.

ಜಾನಪದ ವಿದ್ವಾಂಸ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರು ಕಾಳೇನಹಳ್ಳಿ ಮಾತನಾಡಿ, ‘ತಾಲ್ಲೂಕಿನಲ್ಲಿ ಸಾಕಷ್ಟು ಕಲಾವಿದರಿದ್ದಾರೆ, ಮುಂಬರುವ ದಿನಗಳಲ್ಲಿ ಇವರಿಗೆ ಸೂಕ್ತ ವೇದಿಕೆ ಕಲ್ಪಿಸಬೇಕಿದೆ’ ಎಂದು ತಿಳಿಸಿದರು.

ಕರ್ನಾಟಕ ಜಾನಪದ ಅಕಾಡೆಮಿ ರಿಜಿಸ್ಟ್ರಾರ್ ಎನ್. ನಮ್ರತಾ, ಅಕಾಡೆಮಿಯ ಸದಸ್ಯ ಸಂಚಾಲಕ ಎಸ್.ಎಸ್. ನಿಂಗಪ್ಪ, ಸದಸ್ಯ ಶ್ರೀವತ್ಸ, ತಾಲ್ಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಬಿ.ಎನ್. ಚಿಕ್ಕೇಗೌಡ ಇದ್ದರು. ಕಲಾವಿದರು ವೀರಗಾಸೆ, ಚಿಟ್ ಮೇಳ, ಡೊಳ್ಳುಕುಣಿತ, ಕೋಲಾಟ, ಜಡೆಕೋಲಾಟ, ಸೋಬಾನೆ ಪದ ಸೇರಿ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT