ಭಾನುವಾರ, ಜುಲೈ 25, 2021
28 °C

ವರದಕ್ಷಿಣೆ ಕಿರುಕುಳ ಮಹಿಳೆ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನುಗ್ಗೇಹಳ್ಳಿ : ಹೋಬಳಿಯ ಹೂವಿನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ಗಂಡನ ಮನೆಯವರು ನೀಡಿದ ವರದಕ್ಷಿಣೆ ಕಿರುಕುಳಕ್ಕೆ ಮಾನಸ (22) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಾಗೂರು ಹೋಬಳಿ ಕಾಮನಾ
ಯಕನಹಳ್ಳಿಯಿಂದ ಕಳೆದ 11 ತಿಂಗಳ ಹಿಂದಷ್ಟೆ ನುಗ್ಗೇಹಳ್ಳಿ ಹೋಬಳಿ ಹೂವಿನಹಳ್ಳಿ ಗ್ರಾಮದ ಕೀರ್ತಿಯೊಂದಿಗೆ ಮದುವೆಯಾಗಿತ್ತು. ಪ್ರಾರಂಭದಲ್ಲಿ ಚೆನ್ನಾಗಿದ್ದ ಸಂಸಾರ ನಂತರ ಗಂಡ ಅತ್ತೆ ಮಾವ ವರದಕ್ಷಿಣೆಗಾಗಿ ಪೀಡಿಸುತ್ತಿದ್ದರು ಎಂದು ಮೃತ ಮಹಿಳೆ ಸಂಬಂಧಿಕರು ಆರೋಪಿಸಿದ್ದಾರೆ.
ಶನಿವಾರ ಬೆಳಿಗ್ಗೆ ಮಾನಸಳೊಂದಿಗೆ ಗಂಡ ಹಾಗೂ ಅವರ ತಂದೆ ತಾಯಿ ಜಗಳ ಮಾಡಿದ್ದಾರೆ. ನಂತರ ಮೂವರು ತೋಟಕ್ಕೆ ಹೋದ ಸಂದರ್ಭದಲ್ಲಿ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಸಂಬಂಧ ಡಿವೈಎಸ್ಪಿ ಲಕ್ಷ್ಮೇಗೌಡ ಹಾಗೂ ವೃತ್ತ ನಿರೀಕ್ಷಕ ಕುಮಾರ್ ತನಿಖೆ ನಡೆಸಿ ಕೀರ್ತಿ, ಅವನ ತಂದೆ ತಾಯಿ
ಯನ್ನು ಬಂಧಿಸಲಾಗಿದೆ. ಈ ಸಂಬಂಧ ನುಗ್ಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯನ್ನು ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಲಾಯಿತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.