ಹಾಸನ: ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಯಾವುದೇ ಲೋಪವಿದ್ದಲ್ಲಿ ಡಿ. 17 ರೊಳಗೆ ಸರಿಪಡಿಸಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಕವಿತ ರಾಜಾರಾಂ ತಿಳಿಸಿದರು.

ಕರಡು ಮತದಾರರ ಪಟ್ಟಿ ಪ್ರಕಟಿಸುವ ಬಗ್ಗೆ ನಡೆದ ಸಭೆಯಲ್ಲಿ ಬುಧವಾರ ಮಾತನಾಡಿದ ಅವರು, 2021ರ ಜನವರಿಗೆ 18 ವರ್ಷ ತುಂಬುವ ಎಲ್ಲರೂ ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವಂತೆ ಚುನಾವಣಾ ತಹಶೀಲ್ದಾರ್ ಹಾಗೂ ಜನಪ್ರತಿನಿಧಿಗಳಿಗೆ ಹೇಳಿದರು.

ಡಿ. 17 ರವರೆಗೆ ಬರುವ ನಾಲ್ಕು ಭಾನುವಾರಗಳಂದು ಮತಗಟ್ಟೆ ಅಧಿಕಾರಿ (ಬಿ.ಎಲ್.ಒ)ಗಳು ಕರ್ತವ್ಯ ನಿರ್ವಹಿಸುವರು. ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವವರು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಸಲ್ಲಿಸಬಹುದು ಎಂದರು.

ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಕಾರಣ ಆಕ್ಷೇಪಣೆ ಸಲ್ಲಿಸಲು ಬರುವ ವ್ಯಕ್ತಿಗಳು ಕಡ್ಡಾಯವಾಗಿ ಮಾಸ್ಕ್
ಧರಿಸುವುದು ಹಾಗೂ ಅಂತರ ಕಾಯ್ದುಕೊಳ್ಳುವಂತೆ ಕಟ್ಟುನಿಟ್ಟಿನ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಚುನಾವಣಾ ತಹಶೀಲ್ದಾರ್ ಎಚ್.ಡಿ. ಪದ್ಮನಾಭ ಶಾಸ್ತ್ರಿ ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.