ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ: 23,038 ಮತದಾರರು

19ಕ್ಕೆ ಅಧಿಸೂಚನೆ; ನೀತಿ ಸಂಹಿತೆ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಸೂಚನೆ
Last Updated 14 ಮೇ 2022, 16:26 IST
ಅಕ್ಷರ ಗಾತ್ರ

ಹಾಸನ: ವಿಧಾನ ಪರಿಷತ್‌ಗೆ ದಕ್ಷಿಣ ಪದವೀಧರರ ಕ್ಷೇತ್ರದಿಂದ ನಡೆಯಲಿ ರುವ ಚುನಾವಣೆಗೆ ವೇಳಾಪಟ್ಟಿ ಪ್ರಕಟ ವಾಗಿದ್ದು, ಮೇ 19ಕ್ಕೆ ಅಧಿಸೂಚನೆ ಹೊರ ಬೀಳಲಿದೆ ಎಂದು ಸಹಾಯಕ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದರು.

ಮೇ 26ರಂದು ನಾಮಪತ್ರ ಸಲ್ಲಿಸಲು ಕೊನೇ ದಿನ. 27ರಂದು ನಾಮಪತ್ರಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಮೇ 30 ಕೊನೇ ದಿನ.ಜೂನ್ 13ರಂದು ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಮತಎಣಿಕೆ ಜೂನ್ 15ರಂದು ನಡೆಯಲಿದೆ ಎಂದು ಮಾಹಿತಿ ನೀಡಿದರು.

‘ಮಂಡ್ಯ, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣಪದವೀಧರರ ಕ್ಷೇತ್ರದಿಂದ ನಡೆಯಲಿರುವ ಚುನಾವಣೆಗೆ ಜಿಲ್ಲೆಯಲ್ಲಿ ಒಟ್ಟು 23,038 ಮತದಾರರಿದ್ದಾರೆ. ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ನಾಮಪತ್ರ ಸಲ್ಲಿಸಲು ಕೊನೇ ದಿನದವರೆಗೂ ನಮೂನೆ 18 ಅನ್ನು ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಹಾಗೂತಾಲ್ಲೂಕು ಕಚೇರಿಗಳಿಗೆ ಸಲ್ಲಿಸಬಹುದು’ ಎಂದು ತಿಳಿಸಿದರು.

ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಜಿಲ್ಲೆ ಎಲ್ಲ ಪ್ರವಾಸಿ ಮಂದಿರಗಳನ್ನು ತಹಶೀಲ್ದಾರ್ ವಶಕ್ಕೆ ಹಾಗೂ ನಿಗಮ, ಮಂಡಳಿ, ರಾಜಕೀಯ ಪ್ರತಿನಿಧಿಗಳಿಗೆ ನೀಡಿರುವ ಸರ್ಕಾರಿ ವಾಹನಗಳನ್ನು ವಶಕ್ಕೆ ಪಡೆಯಲು ಅಧಿಕಾರಿಗಳಿಗೆ ಸೂಚನೆನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT