ಉಪಾಧ್ಯಕ್ಷ ಸ್ಥಾನಕ್ಕೆ ಹೇಮಲತಾ ಸ್ಪರ್ಧೆ
ನಗರಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆಯುವ ಚುನಾವಣೆಯಲ್ಲಿ ಪಕ್ಷದ ಹೇಮಲತಾ ಕಮಲ್‌ಕುಮಾರ್ ಸ್ಪರ್ಧಿಸುತ್ತಿದ್ದು ಅವರಿಗೆ ಬಿಜೆಪಿ ಸದಸ್ಯರ ಸಂಪೂರ್ಣ ಬೆಂಬಲವಿದೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಯೋಗೇಶ್ ಗೌಡ ತಿಳಿಸಿದರು. ಉಪಾಧ್ಯಕ್ಷ ಸ್ಥಾನ ತೆರವಾಗಿದ್ದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡರ ಜೊತೆ ಚರ್ಚಿಸಿ ಹೇಮಲತಾ ಅವರನ್ನು ಕಣಕ್ಕೆ ಇಳಿಸಲಾಗುತ್ತಿದೆ. ಹಲವು ವರ್ಷಗಳಿಂದ ಕಮಲ್ ಕುಮಾರ್ ಅವರು ಬಿಜೆಪಿಯಲ್ಲಿ ಪಕ್ಷ ಸಂಘಟನೆಗೆ ಶ್ರಮಿಸಿದ್ದಾರೆ. ಅವರ ಪತ್ನಿ ಹೇಮಲತಾ ಅವರೇ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಲಿ ಎಂದು ಪಕ್ಷ ತೀರ್ಮಾನಿಸಿದೆ ಎಂದರು. ನಗರಸಭೆ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ. ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಯಾದಲ್ಲಿ ಪ್ರೀತಂ ಗೌಡ ಪಕ್ಷದ ಮುಖಂಡರು ಹಾಗೂ ನಗರಸಭೆ ಬಿಜೆಪಿ ಸದಸ್ಯರೆಲ್ಲ ಸೇರಿ ಒಮ್ಮತದ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ಹೇಳಿದರು.