ಶುಕ್ರವಾರ, ಏಪ್ರಿಲ್ 23, 2021
28 °C

ಕಾಡಾನೆ ದಾಳಿಗೆ ಕಂಟೇನರ್ ಚಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 75ರ ಕೆಂಪುಹಳ್ಳದ ಬಳಿಯ ರಸ್ತೆ
ಪಕ್ಕ ಕಂಟೇನರ್‌ ನಿಲ್ಲಿಸಿ ಬಹಿರ್ದೆಸೆಗೆ ತೆರಳಿದ್ದ ಚಾಲಕ ಕಾಡಾನೆ ದಾಳಿಗೆ ಸಿಲುಕಿ ಗುರುವಾರ ರಾತ್ರಿ
ಮೃತಪಟ್ಟಿದ್ದಾರೆ.

ರಾಜಸ್ಥಾನದ ಭರತ್‌ಪುರದ ವಾಕಿಲ್‌ (26) ರಾತ್ರಿ 8 ಗಂಟೆಯಲ್ಲಿ ಕಂಟೇನರ್‌ ನಿಲ್ಲಿಸಿ ಬಹಿರ್ದೆಸೆಗೆ ತೆರಳಿದ್ದರು. ಆನೆ ಕಾಲ್ತುಳಿತದಿಂದ ಸ್ಥಳದಲ್ಲೇ ಮೃತಪಟ್ಟಿದ್ದು, ರಸ್ತೆ ಪಕ್ಕ ಶವ ಪತ್ತೆಯಾಗಿದೆ. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು