ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೆ ದಾಳಿ: ಭತ್ತದ ಬೆಳೆಗೆ ಹಾನಿ

Last Updated 20 ಸೆಪ್ಟೆಂಬರ್ 2020, 2:34 IST
ಅಕ್ಷರ ಗಾತ್ರ

ಹೆತ್ತೂರು: ಹೋಬಳಿಯ ಕೊಂತನಮನೆ, ಜೆಡ್ಡಿಗದ್ದೆ ಗ್ರಾಮದಲ್ಲಿ ಕಾಡಾನೆಗಳು ಭತ್ತದ ಗದ್ದೆಗಳಲ್ಲಿ ಶನಿವಾರ ದಾಂದಲೆ ನಡೆಸಿ ಅಪಾರ ಪ್ರಮಾಣದ ಬೆಳೆಯನ್ನು ತುಳಿದು ಹಾಕಿವೆ.

ಗ್ರಾಮದ ಕೆ.ಟಿ.ಕಾಳೇಗೌಡ, ಗೊವಿಂದಗೌಡ ಎಂಬುವರ ಜಮೀನಿಗೆ ನುಗ್ಗಿರುವ ಕಾಡಾನೆಗಳ ಹಿಂಡು ಭತ್ತದ ಬೆಳೆಯನ್ನು ನಾಶಪಡಿಸಿವೆ.

ಇತ್ತೀಚೆಗೆ ಮಲೆನಾಡು ಭಾಗದ ಗ್ರಾಮಗಳಲ್ಲಿ ಕಾಡು ಪ್ರಾಣಿಗಳಾದ ಕಾಡೆಮ್ಮೆ, ಆನೆ, ಕಾಡು ಹಂದಿ, ಮಂಗಗಳ ಕಾಟ ಹೆಚ್ಚಾಗಿದೆ. ಕಾಡು ಪ್ರಾಣಿಗಳ ಉಪಟಳಕ್ಕೆ ಅಪಾರ ಪ್ರಮಾಣದ ಬೆಳೆ ನಷ್ಟವಾಗುತ್ತಿದ್ದು, ಬೆಳೆದ ಬೆಳೆ ರೈತರ ಕೈಗೆಟುಕದಂತಾಗಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT