ಶುಕ್ರವಾರ, ನವೆಂಬರ್ 27, 2020
21 °C

ಕಾಡಾನೆ ದಾಳಿ: ಬೆಳೆ ಹಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅರಕಲಗೂಡು: ತಾಲ್ಲೂಕಿನ ಮಲ್ಲಿಪಟ್ಟಣ ಹೋಬಳಿಯ ಗ್ರಾಮಗಳಲ್ಲಿ ಗುರುವಾರ ರಾತ್ರಿ ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿವೆ.

ಕೊಡಗಿನ ಗಡಿ ಭಾಗದ ಗ್ರಾಮಗಳಾದ ಮಾಗೋಡು, ನೆಲಬಳ್ಳಿ, ಪಾರಸನಹಳ್ಳಿ, ಮದಲಾಪುರ ಸುತ್ತಮುತ್ತಲ ಗ್ರಾಮಗಳಲ್ಲಿ 8 ಆನೆಗಳ ಗುಂಪು ಜಮೀನಿಗೆ ನುಗ್ಗಿ ಭತ್ತ, ರಾಗಿ, ಕಾಫಿ, ತೆಂಗು, ಅಡಿಕೆ ಮುಂತಾದ ಬೆಳೆಗಳನ್ನು ನಾಶಗೊಳಿಸಿವೆ. ಕೊಳವೆ ಬಾವಿಯಿಂದ ಜಮೀನಿಗೆ ನೀರು ಹಾಯಿಸಲು ಅಳವಡಿಸಿದ್ದ ಪೈಪ್‌ಗಳನ್ನು ತುಳಿದು ಹಾಳು ಮಾಡಿವೆ.

ಸಂಜೆ 6 ಗಂಟೆ ಆಗುತ್ತಿದ್ದಂತೆ ಕಾಡಾನೆಗಳು ಜಮೀನಿಗೆ ದಾಳಿ ಇಟ್ಟು ಬೆಳೆ ಹಾನಿ ಮಾಡುವುದಲ್ಲದೇ, ಬೆಳಿಗ್ಗೆ 6 ಗಂಟೆಯವರೆಗೂ ಬೀಡು ಬಿಟ್ಟಿರುತ್ತವೆ. ಸಂಜೆಯಾದರೆ ಜನರು ಆನೆಗಳ ಭೀತಿಯಿಂದ ಮನೆಯಿಂದ ಹೊರ ಬರಲು ಹೆದರುವ ಪರಿಸ್ಥಿತಿ ಉಂಟಾಗಿದೆ. ಅರಣ್ಯ ಇಲಾಖೆ ಆನೆಗಳ ಹಾವಳಿ ತಪ್ಪಿಸಬೇಕು. ನಷ್ಟಕ್ಕೊಳಗಾದ ರೈತರಿಗೆ ಅಗತ್ಯ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎ.ಸಿ.ದೇವರಾಜೇಗೌಡ ಆಗ್ರಹಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.