ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ನಿಯಂತ್ರಣಕ್ಕೆ ತುರ್ತು ಕ್ರಮಕ್ಕೆ ಸಚಿವ ಕೆ.ಗೋಪಾಲಯ್ಯ ಸೂಚನೆ

ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಸೂಚನೆ
Last Updated 18 ಜನವರಿ 2022, 17:14 IST
ಅಕ್ಷರ ಗಾತ್ರ

ಹಾಸನ: ‘ಜಿಲ್ಲೆಯಲ್ಲಿ ಕೋವಿಡ್ ದೃಢ ಪ್ರಮಾಣ ಹೆಚ್ಚಿರುವ ಕಾರಣ ತುರ್ತು ನಿಯಂತ್ರಣ ಕ್ರಮ ಕೈಗೊಳ್ಳಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ಮತ್ತು ವಿಡಿಯೊ ಸಂವಾದ ನಡೆಸಿದ ಅವರು ಕೋವಿಡ್ ಹೆಚ್ಚಳ ಹಿನ್ನೆಲೆ ಸೋಂಕಿನ ಲಕ್ಷಣ ಇರುವ ಎಲ್ಲರ ಮನೆಗಳಿಗೆ ಔಷಧಿ ತಲುಪಿಸಿ ಎಂದು ಸೂಚನೆ ನೀಡಿದರು.

ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ‘ಈ ಬಾರಿ ಸೋಂಕಿತರಿಗೆ ಗಂಭೀರ ಆರೋಗ್ಯ ಸಮಸ್ಯೆ ಕಾಡುತ್ತಿಲ್ಲ. ಹಾಗಾಗಿ ರೋಗ ಲಕ್ಷಣ ಇರುವವರು ಮಾತ್ರೆಗಾಗಿ ಆಸ್ಪತ್ರೆಗೆ ಅಲೆದಾಡುವ ಬದಲು ಹಳ್ಳಿಹಳ್ಳಿಗಳಲ್ಲಿ ಶೀತ, ಜ್ವರ, ನೆಗಡಿ ಇರುವವರ ಬಗ್ಗೆ ಮಾಹಿತಿ ಕಲೆಹಾಕಿ ಮನೆಗಳಿಗೆ ಮಾತ್ರೆ ಪಾಕೆಟ್ ತಲುಪಿಸಿ ’ಎಂದು ಸಲಹೆ ನೀಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಕೀಯ ಚಿಕಿತ್ಸಾ ಸಾಮರ್ಥ್ಯ ಬಲಪಡಿಸಿ, ತಾಲ್ಲೂಕು ಆಸ್ಪತ್ರೆಗಳಲ್ಲಿ ಎಕ್ಸ್ ರೇ, ಲ್ಯಾಬ್ ತಂತ್ರಜ್ಞರನ್ನು ನೇಮಕ ಮಾಡಿಕೊಡಿ. ಸಾರ್ವಜನಿಕರಿಗೆ ಬಯ ಉಂಟಾಗದಂತೆ ಕೋವಿಡ್ ಸುರಕ್ಷತಾ ನಿಯಮಗಳ ಬಗ್ಗೆ ಅರಿವು ಮೂಡಿಸಿ. ಯಾರು ಹೆದರುವ ಅಗತ್ಯ ಇಲ್ಲ ಎಂದರು.

ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ, ‘ಜಿಲ್ಲೆಯಲ್ಲಿ 5,732 ಸಕ್ರಿಯ ಪ್ರಕರಣಗಳಿವೆ. ಒಂದು ವಾರದಲ್ಲಿ ಶೇ 14.71 ರಷ್ಟು ಪಾಸಿಟಿವಿಟಿ ದರ ಇದ್ದು, ಇಂದು ಶೇ 36 ರಷ್ಟು ಇದೆ’ ಎಂದು ಸಭೆಗೆ ಮಾಹಿತಿ ನೀಡಿದರು.

‘ಆಸ್ಪತ್ರೆ ದಾಖಲಾಗುತ್ತಿರುವ ಪ್ರಮಾಣ ಕಡಿಮೆ ಇದೆ. ಜಿಲ್ಲೆಯಲ್ಲಿ 118 ಶಾಲೆ ಹಾಗೂ 36 ಕಾಲೇಜುಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಹೆಚ್ಚಿನ ಪ್ರಕರಣ ಕಂಡುಬಂದಲ್ಲಿ ತರಗತಿ ನಡೆಸದೆ ಐದು ದಿನ ರಜೆ ನೀಡಲಾಗುತ್ತಿದೆ. ಸಾಕಷ್ಟು ಪ್ರಮಾಣದಲ್ಲಿ ಔಷಧಿ ಖರೀದಿಸಲಾಗಿದ್ದು, ಎಲ್ಲಾ ತಾಲ್ಲೂಕುಗಳಿಗೂ ಒದಗಿಸಲಾಗುತ್ತಿದೆ. ಎಲ್ಲಾ ತಾಲ್ಲೂಕುಗಳಲ್ಲಿ ಕೋವಿಡ್ ವಾರ್ ರೂಂ ತೆರೆಯಲಾಗಿದೆ, 15 ಕೋವಿಡ್ ಆರೈಕೆ ಕೇಂದ್ರ ಗುರುತಿಸಲಾಗಿದೆ’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಉಪ ವಿಭಾಗಾಧಿಕಾರಿ ಬಿ.ಎ ಜಗದೀಶ್, ಎಎಸ್ಪಿ ಬಿ.ಎನ್‌ ನಂದಿನಿ, ಜಿಲ್ಲಾ ಪಂಚಾಯಿತಿ ಸಿಇಒ ಕಾಂತರಾಜ್, ಹಿಮ್ಸ್ ನಿರ್ದೇಶಕ ಡಾ.ಬಿ.ಸಿ ರವಿಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಕೃಷ್ಣಮೂರ್ತಿ, ವಿವಿಧ ಇಲಾಖೆ ಅಧಿಕಾರಿಗಳು ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT